ಹದಗೆಟ್ಟಿತು ವರ್ತೂರು ಸಂತೋಷ್​-ತನಿಷಾ ಫ್ರೆಂಡ್​ಶಿಪ್; ಆಗ ಹೇಗಿದ್ರು, ಈಗ ಹೇಗಾಗಿದ್ದಾರೆ ನೋಡಿ..

Updated on: Dec 08, 2023 | 2:57 PM

ವರ್ತೂರು ಸಂತೋಷ್ ಹಾಗೂ ತನಿಷಾ ಕುಪ್ಪಂಡ ಮಧ್ಯೆ ಒಳ್ಳೆಯ ಗೆಳೆತನ ಇತ್ತು. ಆದರೆ, ಈ ಗೆಳೆತನ ಈಗ ಮುರಿದು ಬಿದ್ದಿದೆ. ಇಬ್ಬರೂ ಸದಾ ಕಿತ್ತಾಡಿಕೊಳ್ಳುತ್ತಿದ್ದಾರೆ.

ವರ್ತೂರು ಸಂತೋಷ್ ಹಾಗೂ ತನಿಷಾ ಕುಪ್ಪಂಡ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಇತ್ತು. ಆದರೆ, ಈ ಫ್ರೆಂಡ್​ಶಿಪ್ ಮುರಿದು ಬಿದ್ದಿದೆ. ‘ತನಿಷಾ ತುಂಬಾನೇ ಕೆಟ್ಟ ಆಟ ಆಡುತ್ತಾರೆ’ ಎಂದು ವರ್ತೂರು ಸಂತೋಷ್ (Varthur Santosh) ಅವರು ಓಪನ್ ಆಗಿ ಹೇಳಿದ್ದಾರೆ. ಅವರಿಬ್ಬರೂ ಮೊದಲಿನಷ್ಟು ಆಪ್ತವಾಗಿಲ್ಲ. ಮುಂದಿನ ದಿನಗಳಲ್ಲಿ ಫ್ರೆಂಡ್​ಶಿಪ್ ಮತ್ತಷ್ಟು ಹದಗೆಡುವ ಸಾಧ್ಯತೆ ಇದೆ. ಇಬ್ಬರ ಫ್ರೆಂಡ್​ಶಿಪ್ ಮೊದಲು ಹೇಗಿತ್ತು, ಈಗ ಹೇಗಿದೆ ಎಂಬ ಬಗ್ಗೆ ಕಲರ್ಸ್ ಕನ್ನಡ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ವಿಡಿಯೋ ಒಂದನ್ನು ಹಂಚಿಕೊಳ್ಳಲಾಗಿದೆ. ಈ ವಿಡಿಯೋ ವೈರಲ್ ಆಗಿದೆ. ‘ಬಿಗ್ ಬಾಸ್ ಮನೆಯಲ್ಲಿ ಫ್ರೆಂಡ್​ಶಿಪ್ ಉಳಿಯಲ್ಲ’ ಎಂದು ಅನೇಕರು ಮಾತನಾಡಿಕೊಂಡಿದ್ದಾರೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡಲು ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More