ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?

Updated on: Dec 28, 2024 | 8:32 AM

ಸದ್ಯ ಬಿಗ್ ಬಾಸ್ ಮನೆಯಲ್ಲಿ 10 ಸ್ಪರ್ಧಿಗಳು ಇದ್ದಾರೆ. ಈ ಪೈಕಿ ಎಂಟು ಮಂದಿ ನಾಮಿನೇಟ್ ಆಗಿದ್ದಾರೆ. ಹೀಗಾಗಿ, ಈ ವಾರ ಯಾರು ಎಲಿಮಿನೇಟ್ ಆಗುತ್ತಾರೆ ಎನ್ನುವ ಪ್ರಶ್ನೆ ಅಭಿಮಾನಿಗಳಿಗೆ ಮೂಡಿದೆ. ಭಾನುವಾರ ಈ ಪ್ರಶ್ನೆಗೆ ಉತ್ತರ ಸಿಗಲಿದೆ. ಈ ವಾರ ಒಬ್ಬರು ಸ್ಪರ್ಧಿ ಔಟ್ ಆಗೋದು ಪಕ್ಕಾ ಎನ್ನಲಾಗುತ್ತಿದೆ.

ಈ ವಾರ ಚೈತ್ರಾ ಕುಂದಾಪುರ, ಗೌತಮಿ, ಮಂಜು, ಧನರಾಜ್, ಹನುಮಂತ, ಮೋಕ್ಷಿತಾ, ತ್ರಿವಿಕ್ರಂ ಹಾಗೂ ಐಶ್ವರ್ಯಾ ನಾಮಿನೇಟ್ ಆಗಿದ್ದಾರೆ. ಈ ವಾರ 10 ಸ್ಪರ್ಧಿಗಳ ಪೈಕಿ ಎಂಟು ಮಂದಿ ನಾಮಿನೇಟ್ ಆಗಿದ್ದು, ಕುತೂಹಲ ಹೆಚ್ಚಿದೆ. ಈ ಮೊದಲು ಹಲವು ಚಾನ್ಸ್ ಪಡೆದು ಉಳಿದುಕೊಂಡಿರೋ ಐಶ್ವರ್ಯಾ ಈ ವಾರ ಎಲಿಮಿನೇಟ್ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More