AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ

ಮಂಜುನಾಥ ಸಿ.
|

Updated on: Nov 23, 2024 | 4:33 PM

Share

Bigg Boss Kannada: ಮನೆಯಲ್ಲಿನ ಅವಾಚ್ಯ ಶಬ್ದಗಳನ್ನು ಬಳಸಿ ಮಾತನಾಡಿದ್ದಕ್ಕೆ ಲಾಯರ್ ಜಗದೀಶ್ ಅನ್ನು ಮನೆಯಿಂದ ಹೊರಗಟ್ಟಲಾಗಿದೆ. ಇದೀಗ ಅವರಂತೇ ನಾಲಗೆ ಮೇಲೆ ಲಗಾಮಿಲ್ಲದ ರಜತ್ ಮನೆ ಸೇರಿಕೊಂಡಿದ್ದಾರೆ. ಶನಿವಾರದ ಎಪಿಸೋಡ್​ನಲ್ಲಿ ಸುದೀಪ್, ನಗುತ್ತಲೇ ರಜತ್​ಗೆ ಎಚ್ಚರಿಕೆ ನೀಡಿದ್ದಾರೆ.

ಬಿಗ್​ಬಾಸ್​ ಕನ್ನಡ ಸೀಸನ್ 11 ರಲ್ಲಿ ಈ ವಾರ ಮನೆಯಲ್ಲಿ ಸಾಕಷ್ಟು ಘಟನೆಗಳು ನಡೆದಿವೆ. ಸ್ಪರ್ಧಿಗಳೊಂದಿಗೆ ಕೆಟ್ಟದಾಗಿ ವರ್ತಿಸಿದ್ದಕ್ಕೆ, ಅವಾಚ್ಯ ಶಬ್ದಗಳ ಬಳಕೆ ಮಾಡಿದ್ದಕ್ಕೆ ಈಗಾಗಲೇ ಲಾಯರ್ ಜಗದೀಶ್ ಅನ್ನು ಹೊರಗೆ ಕಳಿಸಲಾಗಿದೆ. ಇದೀಗ ಜಗದೀಶ್​ ಸಹೋದರ ಒಬ್ಬ ಮನೆಗೆ ಬಂದಿದ್ದಾರೆ ಆತನ ಹೆಸರೇ ರಜತ್. ಜಗದೀಶ್​ ರೀತಿಯೇ ಹೊಲಸು ಮಾತುಗಳನ್ನು ಆಡುತ್ತಾ ಮನೆಯ ಇತರೆ ಸದಸ್ಯರಿಗೆ ಕಿರಿಕಿರಿ ನೀಡುತ್ತಿದ್ದಾರೆ. ಶನಿವಾರ ಬಂದಿದ್ದು ಸುದೀಪ್ ಬಂದಿದ್ದಾರೆ. ಮನೆಯ ಸದಸ್ಯರ ಬಗ್ಗೆ ಅವಾಚ್ಯವಾಗಿ ಮಾತನಾಡಿದ ರಜತ್​ಗೆ ನಗುತ್ತಲೇ ಎಚ್ಚರಿಕೆ ನೀಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More