ಈ ಸೀಸನ್​ನಲ್ಲಿ ಎಲಿಮಿನೇಟ್ ಆದ ಸ್ಪರ್ಧಿಗಳ ಮರು ಎಂಟ್ರಿ; ಜಗದೀಶ್​ ಕಥೆ ಏನು?

Updated on: Jan 17, 2025 | 8:16 AM

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಈ ವಾರ ಮಾಜಿ ಸ್ಪರ್ಧಿಗಳ ಎಂಟ್ರಿ ಆಗಿದೆ. ಈ ಸೀಸನ್​ನಲ್ಲಿ ಈ ಮೊದಲು ಬಂದು ಹೋದ ಸ್ಪರ್ಧಿಗಳು ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಈ ವೇಳೆ ಜಗದೀಶ್ ಅವರು ಬಂದಿಲ್ಲ ಎಂದು ಹೇಳಲಾಗುತ್ತಿದೆ. ಪ್ರೋಮೋ ರಿಲೀಸ್ ಆಗಿದೆ.

ಕಲರ್ಸ್ ಕನ್ನಡ ಹೊಸ ಬಿಗ್ ಬಾಸ್ ಪ್ರೋಮೋ ರಿಲೀಸ್ ಮಾಡಿದೆ. ಈ ಪ್ರೋಮೋದಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಎಲಿಮಿನೇಟ್ ಆದ ಸ್ಪರ್ಧಿಗಳು ರೀ ಎಂಟ್ರಿ ಪಡೆದಿದ್ದಾರೆ. ಶಿಶಿರ್, ರಂಜಿತ್ ಮೊದಲಾದ ಸ್ಪರ್ಧಿಗಳು ಕಾಣಿಸಿಕೊಂಡಿದ್ದಾರೆ. ಆದರೆ, ಜಗದೀಶ್ ಅವರು ಪ್ರೋಮೋದಲ್ಲಿ ಕಾಣಿಸಿಲ್ಲ. ಅವರು ಬಂದಿರೋದು ಅನುಮಾನ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More