ಈ ಬಾರಿ ಬಿಗ್ ಬಾಸ್​ನಲ್ಲಿ ಕಾಮನ್​ ಮ್ಯಾನ್ ಇರ್ತಾರಾ? ಕಿಚ್ಚ ಸುದೀಪ್ ಹೇಳೋದೇನು?

Updated on: Jul 01, 2025 | 11:45 AM

ಕಳೆದ ವರ್ಷ ಬಿಗ್ ಬಾಸ್​​ನಲ್ಲಿ ಕೇವಲ ಸೆಲೆಬ್ರಿಟಿಗಳು ಮಾತ್ರ ಭಾಗಿ ಆಗಿದ್ದರು. ಆದರೆ, ಈ ಬಾರಿ ಆ ರೀತಿ ಇರೋದಿಲ್ಲ ಎಂದು ತಂಡದವರು ಹೇಳಿದ್ದಾರೆ. ಕಾಮನ್ ಮ್ಯಾನ್ ಇರ್ತಾರಾ ಅಥವಾ ಇಲ್ಲವಾ ಎಂಬುದು ಕೂಡ ಅಲ್ಲಿಯೇ ರಿವೀಲ್ ಆಗಲಿದೆ ಎಂದು ತಿಳಿಸಲಾಗಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ಆರಂಭಕ್ಕೆ ದಿನಗಣನೆ ಶುರುವಾಗಿದೆ. ಜೂನ್ 30ರಂದು ಸುದ್ದಿಗೋಷ್ಠಿ ನಡೆಸಿ ಸಿನಿಮಾ ಬಗ್ಗೆ ಮಾಹಿತಿ ನೀಡಲಾಯಿತು. ಈ ವೇಳೆ ಈ ಬಾರಿಯ ಸೀಸನ್​ನಲ್ಲಿ ಜನಸಾಮಾನ್ಯರು ಇರುತ್ತಾರೋ ಅಥವಾ ಇಲ್ಲವೋ ಎನ್ನುವ ಪ್ರಶ್ನೆ ಎದುರಾಗಿದೆ. ಕೆಲವು ಸೀಸನ್​ಗಳಲ್ಲಿ ಜನ ಸಾಮಾನ್ಯರಿಗೆ ಅವಕಾಶ ನೀಡಲಾಗಿತ್ತು.  ಶೀಘ್ರದಲ್ಲೇ ರಿಲೀಸ್ ಆಗೋ ಪ್ರೋಮೋದಲ್ಲಿ ಮಾಹಿತಿ ಹಂಚಿಕೊಳ್ಳಲಾಗುತ್ತದೆಯಂತೆ. ಪ್ರೋಮೋನ ಅದ್ದೂರಿಯಾಗಿ ಶೂಟ್ ಮಾಡಲು ನಿರ್ಧರಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Jul 01, 2025 11:44 AM
Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More