ಬಿಗ್ ಬಾಸ್ ಮನೆ ಖಾಲಿ ಮಾಡಿಸಲು ಬಂದ ಅಧಿಕಾರಿಗಳನ್ನು ಕಂಡು ಸ್ಪರ್ಧಿಗಳಿಗೆ ಶಾಕ್
‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋ ನಿಂತಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯ ಅನುಮತಿ ಪಡೆಯದ ಕಾರಣ ಈ ಕಾರ್ಯಕ್ರಮಕ್ಕೆ ವಿಘ್ನ ಎದುರಾಗಿದೆ. ಬಿಗ್ ಬಾಸ್ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಸ್ಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. ಈ ವೇಳೆ ಬಿಗ್ ಬಾಸ್ ಮನೆಯೊಳಗೆ ಇದ್ದ ಎಲ್ಲ ಸ್ಪರ್ಧಿಗಳನ್ನು ಹೊರಗೆ ಕಳಿಸಲಾಗಿದೆ.
‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋ ಸ್ಥಗಿತ ಆಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆಯದ ಕಾರಣ ಶೋಗೆ ತಡೆ ನೀಡಲಾಗಿದೆ. ಬಿಗ್ ಬಾಸ್ ನಡೆಯುತ್ತಿದ್ದ ‘ಜಾಲಿವುಡ್ ಸ್ಟುಡಿಯೋಸ್’ಗೆ (Jollywood Studios) ಅಧಿಕಾರಿಗಳು ಬೀಗ ಜಡಿದಿದ್ದಾರೆ. ಈ ವೇಳೆ ಬಿಗ್ ಬಾಸ್ ಮನೆಯಲ್ಲಿ ಇದ್ದ ಎಲ್ಲ ಸ್ಪರ್ಧಿಗಳನ್ನು ಹೊರಗೆ ಕಳಿಸಲಾಗಿದೆ. ಅಧಿಕಾರಿಗಳನ್ನು ಕಂಡು ಸ್ಪರ್ಧಿಗಳಿಗೆ ಶಾಕ್ ಆಗಿದೆ. ಮಲ್ಲಮ್ಮ, ಮಾಳು ನಿಪನಾಳ, ಕಾಕ್ರೋಜ್ ಸುಧಿ, ಚಂದ್ರಪ್ರಭ, ಮಂಜು ಭಾಷಿಣಿ, ರಕ್ಷಿತಾ ಶೆಟ್ಟಿ ಸೇರಿದಂತೆ ಎಲ್ಲ ಸ್ಪರ್ಧಿಗಳನ್ನು ರೆಸಾರ್ಟ್ಗೆ ಶಿಫ್ಟ್ ಮಾಡಲಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

