ಬಿಗ್ ಬಾಸ್ ಮನೆ ಖಾಲಿ ಮಾಡಿಸಲು ಬಂದ ಅಧಿಕಾರಿಗಳನ್ನು ಕಂಡು ಸ್ಪರ್ಧಿಗಳಿಗೆ ಶಾಕ್

Updated on: Oct 07, 2025 | 9:27 PM

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋ ನಿಂತಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯ ಅನುಮತಿ ಪಡೆಯದ ಕಾರಣ ಈ ಕಾರ್ಯಕ್ರಮಕ್ಕೆ ವಿಘ್ನ ಎದುರಾಗಿದೆ. ಬಿಗ್ ಬಾಸ್ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಸ್​ಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. ಈ ವೇಳೆ ಬಿಗ್ ಬಾಸ್ ಮನೆಯೊಳಗೆ ಇದ್ದ ಎಲ್ಲ ಸ್ಪರ್ಧಿಗಳನ್ನು ಹೊರಗೆ ಕಳಿಸಲಾಗಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋ ಸ್ಥಗಿತ ಆಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆಯದ ಕಾರಣ ಶೋಗೆ ತಡೆ ನೀಡಲಾಗಿದೆ. ಬಿಗ್ ಬಾಸ್ ನಡೆಯುತ್ತಿದ್ದ ‘ಜಾಲಿವುಡ್ ಸ್ಟುಡಿಯೋಸ್’ಗೆ (Jollywood Studios) ಅಧಿಕಾರಿಗಳು ಬೀಗ ಜಡಿದಿದ್ದಾರೆ. ಈ ವೇಳೆ ಬಿಗ್ ಬಾಸ್ ಮನೆಯಲ್ಲಿ ಇದ್ದ ಎಲ್ಲ ಸ್ಪರ್ಧಿಗಳನ್ನು ಹೊರಗೆ ಕಳಿಸಲಾಗಿದೆ. ಅಧಿಕಾರಿಗಳನ್ನು ಕಂಡು ಸ್ಪರ್ಧಿಗಳಿಗೆ ಶಾಕ್ ಆಗಿದೆ. ಮಲ್ಲಮ್ಮ, ಮಾಳು ನಿಪನಾಳ, ಕಾಕ್ರೋಜ್ ಸುಧಿ, ಚಂದ್ರಪ್ರಭ, ಮಂಜು ಭಾಷಿಣಿ, ರಕ್ಷಿತಾ ಶೆಟ್ಟಿ ಸೇರಿದಂತೆ ಎಲ್ಲ ಸ್ಪರ್ಧಿಗಳನ್ನು ರೆಸಾರ್ಟ್​​ಗೆ ಶಿಫ್ಟ್ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More