ಗಿಲ್ಲಿ ನಟ ಏನ್ ಮಾಡಿದ್ದಾನೆ? ಅಶ್ವಿನಿ ಗೌಡ ಪ್ರಶ್ನೆಗೆ ಉತ್ತರ ಕೊಟ್ಟ ಪಳಾರ್ ಫ್ಯಾನ್ಸ್
ದಿನದಿಂದ ದಿನಕ್ಕೆ ಗಿಲ್ಲಿ ನಟ ಅವರ ಫ್ಯಾನ್ ಫಾಲೋಯಿಂಗ್ ಜಾಸ್ತಿ ಆಗುತ್ತಲೇ ಇದೆ. ಈ ಬಾರಿ ಗಿಲ್ಲಿ ನಟ ಅವರೇ ಬಿಗ್ ಬಾಸ್ ಟ್ರೋಫಿ ಗೆಲ್ಲುತ್ತಾರೆ ಎಂಬುದು ಬಹುತೇಕ ವೀಕ್ಷಕರ ಅಭಿಪ್ರಾಯ. ಗಿಲ್ಲಿ ಪರವಾಗಿ ರಾಜ್ಯಾದ್ಯಂತ ಇರುವ ಅಭಿಮಾನಿಗಳು ಪ್ರಚಾರ ಮಾಡುತ್ತಿದ್ದಾರೆ. ವಿಡಿಯೋ ನೋಡಿ..
ಈವರೆಗೂ ‘ಬಿಗ್ ಬಾಸ್ ಕನ್ನಡ’ (Bigg Boss Kannada) ರಿಯಾಲಿಟಿ ಶೋನ 12 ಸೀಸನ್ಗಳು ನಡೆದಿವೆ. ಇಷ್ಟು ಸೀಸನ್ಗಳ ಪೈಕಿ ಅತಿ ಹೆಚ್ಚು ಕ್ರೇಜ್ ಸೃಷ್ಟಿಸಿದ ಸ್ಪರ್ಧಿ ಎಂದರೆ ಅದು ಗಿಲ್ಲಿ ನಟ. ಕಾಮಿಡಿ ಮೂಲಕ ಅವರು ಎಲ್ಲರ ಮನಸ್ಸು ಗೆದ್ದಿದ್ದಾರೆ. ಈ ಬಾರಿ ಗಿಲ್ಲಿ ನಟ (Gilli Nata) ಅವರೇ ಬಿಗ್ ಬಾಸ್ ಟ್ರೋಫಿ ಗೆಲ್ಲುತ್ತಾರೆ ಎಂಬುದು ಬಹುತೇಕ ವೀಕ್ಷಕರ ಅಭಿಪ್ರಾಯ. ಗಿಲ್ಲಿ ಪರವಾಗಿ ರಾಜ್ಯಾದ್ಯಂತ ಇರುವ ಅಭಿಮಾನಿಗಳು ಪ್ರಚಾರ ಮಾಡುತ್ತಿದ್ದಾರೆ. ಗಿಲ್ಲಿ ನಟ ಬಿಗ್ ಬಾಸ್ ಮನೆಯಲ್ಲಿ ಏನು ಮಾಡಿದ್ದಾನೆ ಎಂದು ಅಶ್ವಿನಿ ಗೌಡ (Ashwini Gowda) ಅವರು ಪ್ರಶ್ನೆ ಮಾಡಿದ್ದರು. ಅವರಿಗೆ ಈಗ ಅಭಿಮಾನಿಗಳೇ ಈ ವಿಡಿಯೋ ಮೂಲಕ ಉತ್ತರ ನೀಡಿದ್ದಾರೆ. ದಿನದಿಂದ ದಿನಕ್ಕೆ ಗಿಲ್ಲಿ ನಟ ಅವರ ಫ್ಯಾನ್ ಫಾಲೋಯಿಂಗ್ ಜಾಸ್ತಿ ಆಗುತ್ತಲೇ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

