ವೋಟ್ ಹಾಕಿದ ಪೊಲೀಸರಿಗೂ ಧನ್ಯವಾದ ಹೇಳಿದೆ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ

Updated on: Jan 26, 2026 | 6:28 PM

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಟ್ರೋಫಿ ಗೆದ್ದ ಗಿಲ್ಲಿ ನಟ ಅವರು ಅನೇಕ ಕಾರ್ಯಕ್ರಮಗಳಿಗೆ ಅತಿಥಿಯಾಗಿ ತೆರಳುತ್ತಿದ್ದಾರೆ. ಅವರನ್ನು ಇಷ್ಟಪಡುವ ದೊಡ್ಡ ಅಭಿಮಾನಿ ಬಳಗ ಇದೆ. ಕನಕಪುರದಲ್ಲಿ ನಡೆದ ಕನಕೋತ್ಸವ ಕಾರ್ಯಕ್ರಮದಲ್ಲಿ ಗಿಲ್ಲಿ ನಟ ಭಾಗಿ ಆಗಿದ್ದಾರೆ. ಈ ವೇಳೆ ಅವರು ಭಾವುಕವಾಗಿ ಮಾತನಾಡಿದರು.

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಟ್ರೋಫಿ ಗೆದ್ದ ಗಿಲ್ಲಿ ನಟ ಅವರು ಅನೇಕ ಕಾರ್ಯಕ್ರಮಗಳಿಗೆ ಅತಿಥಿಯಾಗಿ ತೆರಳುತ್ತಿದ್ದಾರೆ. ಅವರನ್ನು ಇಷ್ಟಪಡುವ ದೊಡ್ಡ ಅಭಿಮಾನಿ ಬಳಗ ಇದೆ. ಕನಕಪುರದಲ್ಲಿ ನಡೆದ ಕನಕೋತ್ಸವ ಕಾರ್ಯಕ್ರಮದಲ್ಲಿ ಗಿಲ್ಲಿ ನಟ ಭಾಗಿ ಆಗಿದ್ದಾರೆ. ಈ ವೇಳೆ ಅವರು ಭಾವುಕವಾಗಿ ಮಾತನಾಡಿದರು. ತಮಗೆ ಬೆಂಬಲ ನೀಡಿದ ಪೊಲೀಸರಿಗೂ ಅವರು ಧನ್ಯವಾದ ತಿಳಿಸಿದರು. ‘ಇಷ್ಟೊಂದು ಪ್ರೀತಿ ಸಂಪಾದನೆ ಮಾಡುತ್ತೇನೆ ಅಂತ ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ಸತ್ಯವಾಗಲೂ ಅಂದುಕೊಂಡಿರಲಿಲ್ಲ. ನನ್ನ ಹೆಣ ಬೀಳುವವರೆಗೂ ನಿಮ್ಮ ಋಣ ಮರೆಯಲ್ಲ. ಪೊಲೀಸರ ಕೆಲಸ ಎಷ್ಟು ಕಷ್ಟ ಅಂತ ನನಗೆ ಗೊತ್ತು. 24 ಗಂಟೆ ಅವರು ಕೆಲಸ ಮಾಡುತ್ತಾರೆ. ಅಂಥವರು ನನ್ನ ಶೋ ನೋಡಿ, ಮನೆಯವರಿಂದ ವೋಟ್ ಹಾಕಿಸಿದ್ದಾರೆ. ಆ ವಿಷಯ ಕೇಳಿ ಸಿಕ್ಕಾಪಟ್ಟೆ ಖುಷಿ ಆಗಿದೆ’ ಎಂದು ಗಿಲ್ಲಿ ನಟ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.