ಕೈ ಕೈ ಮಿಲಾಯಿಸುವ ಹಂತಕ್ಕೆ ಹೋದ ‘ಬಿಗ್ ಬಾಸ್ ಕನ್ನಡ 13’ ಶೋ ಸ್ಪರ್ಧಿಗಳು

Updated on: Sep 21, 2026 | 10:07 PM

ಈ ವಾರ ‘ಬಿಗ್ ಬಾಸ್ ಕನ್ನಡ ಸೀಸನ್ 13’ ರಿಯಾಲಿಟಿ ಶೋನಲ್ಲಿ ‘ಎಮರ್ಜೆನ್ಸಿ ಎಗ್ಸಿಟ್’ ಘೋಷಣೆ ಮಾಡಿರುವುದರಿಂದ ತಮ್ಮ ಸ್ಥಾನ ಉಳಿಸಿಕೊಳ್ಳಲು ಸ್ಪರ್ಧಿಗಳು ಕಷ್ಟಪಡುತ್ತಿದ್ದಾರೆ. ಮಿಡ್ ವೀಕ್ ಎಲಿಮಿನೇಷನ್​ನಿಂದ ಪಾರಾಗಲು ಒಂದು ಟಾಸ್ಕ್ ನೀಡಲಾಗಿದೆ. ಈ ಟಾಸ್ಕ್ ಆಡುವಾಗ ಸ್ಪರ್ಧಿಗಳು ಬಹಳ ಅಗ್ರೆಸಿವ್ ಆಗಿ ವರ್ತಿಸಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 13’ ಶೋನಲ್ಲಿ ಹಲವು ಟ್ವಿಸ್ಟ್ ನೀಡಲಾಗುತ್ತಿದೆ. ಪೈಪೋಟಿ ಹೆಚ್ಚಿದಂತೆ ಎಲ್ಲ ಸ್ಪರ್ಧಿಗಳಿಗೆ ಎಲಿಮಿನೇಷನ್ ಭಯ ಕಾಡುತ್ತಿದೆ. ಮಿಡ್ ವೀಕ್ ಎಲಿಮಿನೇಷನ್​ನಿಂದ ಪಾರಾಗಲು ಒಂದು ಟಾಸ್ಕ್ ನೀಡಲಾಗಿದೆ. ಈ ಟಾಸ್ಕ್ ಆಡುವಾಗ ಸ್ಪರ್ಧಿಗಳು ಬಹಳ ಅಗ್ರೆಸಿವ್ ಆಗಿ ವರ್ತಿಸಿದ್ದಾರೆ. ಈ ವೇಳೆ ಪರಸ್ಪರ ತಳ್ಳಾಡಿಕೊಳ್ಳುವ ಹಂತಕ್ಕೆ ಹೋಗಿದ್ದಾರೆ. ಇದರಿಂದಾಗಿ ಸ್ಪರ್ಧಿಗಳ ನಡುವಿನ ವೈರತ್ವ ಜಾಸ್ತಿ ಆಗಿದೆ. ಬೇಕಂತಲೇ ಒಬ್ಬರಿಗೊಬ್ಬರು ತಳ್ಳಾಡಿಕೊಂಡಿದ್ದಾರೆ ಎಂಬ ಆರೋಪ ಬಂದಿದೆ. ಉಸ್ತುವಾರಿ ಮಾಡುತ್ತಿದ್ದ ಸಂಗೀತಾ ಭಟ್ ಅವರನ್ನು ಹಲವರು ಪ್ರಶ್ನೆ ಮಾಡಿದ್ದಾರೆ. ಈ ವಾರ ‘ಎಮರ್ಜೆನ್ಸಿ ಎಗ್ಸಿಟ್’ ಘೋಷಣೆ ಮಾಡಿರುವುದರಿಂದ ತಮ್ಮ ಸ್ಥಾನ ಉಳಿಸಿಕೊಳ್ಳಲು ಸ್ಪರ್ಧಿಗಳು ಕಷ್ಟಪಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More