ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್

Updated on: Sep 09, 2026 | 8:44 PM

‘ಬಿಗ್ ಬಾಸ್ ಕನ್ನಡ ಸೀಸನ್ 13’ ರಿಯಾಲಿಟಿ ಶೋ ಶುರುವಾಗಿ ಎರಡು ದಿನ ಕಳೆದಿದೆ ಅಷ್ಟೇ. ಅಷ್ಟರಲ್ಲಾಗಲೇ ಕೆಲವು ಸ್ಪರ್ಧಿಗಳು ಅತಿಯಾಗಿ ಮಾತನಾಡಲು ಆರಂಭಿಸಿದ್ದಾರೆ. ಅಂಥವರಿಗೆ ಅವಿನಾಶ್ ಅವರು ಖಡಕ್ ವಾರ್ನಿಂಗ್ ನೀಡಿದ್ದಾರೆ. ಮೊದಲ ವಾರವೇ ಬಿಗ್ ಬಾಸ್ ಮನೆಯಲ್ಲಿ ಪೈಪೋಟಿ ಜೋರಾಗಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 13’ ರಿಯಾಲಿಟಿ ಶೋ ಶುರುವಾಗಿ ಎರಡು ದಿನ ಕಳೆದಿದೆ ಅಷ್ಟೇ. ಅಷ್ಟರಲ್ಲಾಗಲೇ ಕೆಲವು ಸ್ಪರ್ಧಿಗಳು ಅತಿಯಾಗಿ ಮಾತನಾಡಲು ಆರಂಭಿಸಿದ್ದಾರೆ. ಅಂಥವರಿಗೆ ಅವಿನಾಶ್ ಅವರು ಖಡಕ್ ವಾರ್ನಿಂಗ್ ನೀಡಿದ್ದಾರೆ. ಮೊದಲ ವಾರವೇ ಬಿಗ್ ಬಾಸ್ ಮನೆಯಲ್ಲಿ ಪೈಪೋಟಿ ಜೋರಾಗಿದೆ. ದೊಡ್ಡ ಧ್ವನಿಯಲ್ಲಿ ಮಾತನಾಡಿ ಗಮನ ಸೆಳೆಯಲು ಪ್ರಯತ್ನಿಸಿದ ಕಿರಣ್ ಶಾಸ್ತ್ರಿಗೆ ಅವಿನಾಶ್, ಪ್ರಥಮಾ ಪ್ರಸಾದ್ ಮುಂತಾದವರು ಎಚ್ಚರಿಕೆ ಕೊಟ್ಟಿದ್ದಾರೆ. ಆದರೂ ಕೂಡ ಕಿರಣ್ ಅವರು ತಮ್ಮ ವಾದವನ್ನೇ ಮುಂದುವರಿಸಿದ್ದಾರೆ. ಸದ್ಯಕ್ಕೆ ಈ ಶೋನಲ್ಲಿ ಕಾಮನರ್ ವರ್ಸಸ್ ಸೆಲೆಬ್ರಿಟಿ ಎಂಬ ವಾತಾವರಣ ನಿರ್ಮಾಣ ಆಗಿದೆ. ಕಾಮನರ್ ಸ್ಪರ್ಧಿಗಳು ವಿಕ್ಟಿಮ್ ಕಾರ್ಡ್ ಪ್ಲೇ ಮಾಡುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Sep 09, 2026 08:44 PM
Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More