ಮಂಜನ ಮಾತಿನಿಂದ ಬಿಗ್ ಬಾಸ್ ಸ್ಪರ್ಧಿಗಳಿಗೆ ಕಿರಿಕಿರಿ; ಕಣ್ಣೀರು ಹಾಕಿದ ಸೌಂದರ್ಯಾ

Updated on: Sep 10, 2026 | 8:23 PM

ಬಿಗ್ ಬಾಸ್ ಮನೆಗೆ ಕಾಲಿಟ್ಟಿರುವ ಕಾಮನರ್ ಮಂಜನ ಮಾತುಗಳು ಎಲ್ಲರಿಗೂ ಕಿರಿಕಿರಿ ಉಂಟುಮಾಡುತ್ತಿವೆ. ಸುಮ್ಮನಿರಿ ಎಂದು ಬೇರೆಯವರು ವಿನಂತಿ ಮಾಡಿದರೂ ಮಂಜ ಸುಮ್ಮನಾಗುತ್ತಿಲ್ಲ. ಸೌಂದರ್ಯ ಶೆಟ್ಟಿ ಕಣ್ಣೀರು ಹಾಕುವ ಪರಿಸ್ಥಿತಿ ಬಂದಿದೆ. ಸೆಪ್ಟೆಂಬರ್ 10 ಸಂಚಿಕೆಯ ಈ ಪ್ರೋಮೋವನ್ನು ‘ಕಲರ್ಸ್ ಕನ್ನಡ’ ವಾಹಿನಿ ಹಂಚಿಕೊಂಡಿದೆ.

ಕಾಮನರ್ ಆಗಿ ಬಿಗ್ ಬಾಸ್ ಮನೆಗೆ ಕಾಲಿಟ್ಟಿರುವ ಮಂಜನ ಮಾತುಗಳು ಎಲ್ಲರಿಗೂ ಕಿರಿಕಿರಿ ಉಂಟುಮಾಡುತ್ತಿವೆ. ಸುಮ್ಮನಿರಿ ಎಂದು ಬೇರೆಯವರು ವಿನಂತಿ ಮಾಡಿದರೂ ಕೂಡ ಮಂಜ ಸುಮ್ಮನಾಗುತ್ತಿಲ್ಲ. ಸೌಂದರ್ಯ ಶೆಟ್ಟಿ ಅವರು ಕಣ್ಣೀರು ಹಾಕುವ ಪರಿಸ್ಥಿತಿ ಬಂದಿದೆ. ಸೆಪ್ಟೆಂಬರ್ 10 ಸಂಚಿಕೆಯ ಪ್ರೋಮೋವನ್ನು ‘ಕಲರ್ಸ್ ಕನ್ನಡ’ ವಾಹಿನಿ ಹಂಚಿಕೊಂಡಿದೆ. ಮೊದಲ ವಾರವೇ ಬಿಗ್ ಬಾಸ್ ಮನೆಯಲ್ಲಿ ಈ ಪರಿ ಜಗಳ ಉಂಟಾಗಿದೆ. ಸ್ಪರ್ಧಿಗಳು ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳುವುದಕ್ಕೂ ಮುನ್ನವೇ ಜಗಳಕ್ಕೆ ಇಳಿದಿದ್ದಾರೆ. ಇದಕ್ಕೆಲ್ಲ ಶನಿವಾರದ ಸಂಚಿಕೆಯಲ್ಲಿ ಕಿಚ್ಚ ಸುದೀಪ್ ಅವರು ಯಾವ ರೀತಿ ಪ್ರತಿಕ್ರಿಯೆ ನೀಡಬಹುದು ಎಂಬುದನ್ನು ತಿಳಿಯುವ ಕೌತುಕ ವೀಕ್ಷಕರಿಗೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More