AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಚ್ಚ ಸುದೀಪ್ ಆಡಿಸಿದ ಆಟಕ್ಕೆ ಬಿಗ್ ಬಾಸ್ ಸ್ಪರ್ಧಿಗಳ ತಲೆ ಗಿರಗಿರ

ಕಿಚ್ಚ ಸುದೀಪ್ ಆಡಿಸಿದ ಆಟಕ್ಕೆ ಬಿಗ್ ಬಾಸ್ ಸ್ಪರ್ಧಿಗಳ ತಲೆ ಗಿರಗಿರ

ಮದನ್​ ಕುಮಾರ್​
|

Updated on: Nov 08, 2026 | 3:33 PM

Share

‘ಬಿಗ್ ಬಾಸ್ ಕನ್ನಡ’ ರಿಯಾಲಿಟಿ ಶೋನಲ್ಲಿ ಭಾನುವಾರ ಬಂದರೆ ಮಸ್ತ್ ಮನರಂಜನೆ ಇರುತ್ತದೆ. ಅದಕ್ಕೆ ಕಾರಣ, ಕಿಚ್ಚ ಸುದೀಪ್ ನಿರೂಪಣೆ. ಈ ಭಾನುವಾರ (ನ.8) ಕೂಡ ಸುದೀಪ್ ಅವರು ಎಂದಿನ ಲವಲವಿಕೆಯಲ್ಲಿ ನಿರೂಪಣೆ ಮಾಡಿದ್ದಾರೆ. ಸ್ಪರ್ಧಿಗಳಿಗೆ ಅವರು ಒಂದು ಡಿಫರೆಂಟ್ ಟಾಸ್ಕ್ ನೀಡಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 13’ ರಿಯಾಲಿಟಿ ಶೋನಲ್ಲಿ ಭಾನುವಾರ ಬಂದರೆ ಮಸ್ತ್ ಮನರಂಜನೆ ಇರುತ್ತದೆ. ಅದಕ್ಕೆ ಕಾರಣ, ಕಿಚ್ಚ ಸುದೀಪ್ ಅವರ ನಿರೂಪಣೆ. ಈ ಭಾನುವಾರ (ನವೆಂಬರ್ 8) ಕೂಡ ಸುದೀಪ್ ಅವರು ಎಂದಿನ ಲವಲವಿಕೆಯಲ್ಲಿ ನಿರೂಪಣೆ ಮಾಡಿದ್ದಾರೆ. ಸ್ಪರ್ಧಿಗಳಿಗೆ ಅವರು ಒಂದು ಡಿಫರೆಂಟ್ ಟಾಸ್ಕ್ ನೀಡಿದ್ದಾರೆ. ಆ ಟಾಸ್ಕ್ ಆಡುವಾಗ ಸ್ಪರ್ಧಿಗಳ ತಲೆ ಗಿರಗಿರ ಎಂದಿದೆ. ಗಗನ್ ಚಿನ್ನಪ್ಪ, ಕಿರಣ್ ಶಾಸ್ತ್ರಿ, ಜಗದೀಶ್, ಆಸಿಯಾ, ಸೋನಿಕಾ, ಪ್ರಶಾಂತ್ ಮುಂತಾದವರು ತಲೆ ತಿರುಗಿ ಬಿದ್ದಿದ್ದಾರೆ. ಈ ಟಾಸ್ಕ್ ಸಖತ್ ತಮಾಷೆಯಾಗಿದೆ. ನವೆಂಬರ್ 8ರ ಬಿಗ್ ಬಾಸ್ ಸಂಚಿಕೆಯ ಪ್ರೋಮೋವನ್ನು ‘ಕಲರ್ಸ್ ಕನ್ನಡ’ ವಾಹಿನಿ ಹಂಚಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More