ಗಗನ್ ಜೋಕರ್​ ಆದ್ರಾ? ಕುನ್ನಿ ಪದ ಬಳಕೆಗೆ ಸುದೀಪ್ ಕ್ಲಾಸ್ ಫಿಕ್ಸ್

Updated on: Nov 14, 2026 | 12:45 PM

ಬಿಗ್ ಬಾಸ್ ಮನೆಯಲ್ಲಿ ಈ ವಾರ ಸಾಕಷ್ಟು ಏರಿಳಿತಗಳು ಇದ್ದವು. ಅದರಲ್ಲಿ ಗಗನ್ ಚಿನ್ನಪ್ಪ ಅವರಿಗೂ ಈ ವಾರ ಕ್ಲಾಸ್ ತೆಗೆದುಕೊಳ್ಳುವುದು ಬಹುತೇಕ ಫಿಕ್ಸ್ ಎಂಬ ಮಾತು ಕೇಳಿ ಬಂದಿದೆ. ಇದಕ್ಕೆ ಅವರು ಕುನ್ನಿ ಎಂದು ಪದ ಬಳಕೆ ಮಾಡಿದ್ದೇ ಕಾರಣ. ಈ ಕಾರಣಕ್ಕೆ ಜೋಕರ್ ಆಗಿದ್ದು ಯಾರು ಎಂಬ ಪದ ಬಳಕೆ ಸುದೀಪ್ ಕಡೆಯಿಂದ ಆಗಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 13’ರಲ್ಲಿ ಈ ವಾರ ಸಾಕಷ್ಟು ಕುತೂಹಲ ಮೂಡಿಸಿದೆ. ಮಂಜು ಮರಳಿದ ಬಳಿಕ ಬಿಗ್ ಬಾಸ್ ಮನೆ ಅಲ್ಲೋಲ ಕಲ್ಲೋಲ ಆಗಿದೆ. ಸಾಕಷ್ಟು ಜಗಳಗಳು ಸೃಷ್ಟಿ ಆಗಿವೆ. ಈ ಎಲ್ಲಾ ವಿಷಯಗಳ ಬಗ್ಗೆ ಸುದೀಪ್ ವೀಕೆಂಡ್ ಎಪಿಸೋಡ್​​ನಲ್ಲಿ ಚರ್ಚೆ ಮಾಡಲಿದ್ದಾರೆ. ಇದರ ಜೊತೆಗೆ ಕುನ್ನಿ ಪದ ಬಳಕೆ ಮಾಡಿದ ಗಗನ್​​ಗೆ ಸುದೀಪ್ ಕ್ಲಾಸ್ ತೆಗೆದುಕೊಳ್ಳುವುದು ಬಹುತೇಕ ಫಿಕ್ಸ್ ಎನ್ನಲಾಗುತ್ತಿದೆ. ಪ್ರೋಮೋದಲ್ಲಿ ‘ಗಗನ್ ಜೋಕರ್’ ಎಂಬುದನ್ನು ಸುದೀಪ್ ಪರೋಕ್ಷವಾಗಿ ಹೇಳಿದ್ದಾರೆ. ಪೂರ್ಣ ಎಪಿಸೋಡ್ ನೋಡಿದ ಬಳಿಕವೇ ಎಲ್ಲದಕ್ಕೂ ಸ್ಪಷ್ಟನೆ ಸಿಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Nov 14, 2026 12:44 PM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More