ಬಿಗ್ ಬಾಸ್ ಕನ್ನಡ ಸೀಸನ್ 13: ಕಳಪೆ ಪಟ್ಟ ಪಡೆದು ಜೈಲು ಸೇರಿದ ಕಿರಣ್ ಶಾಸ್ತ್ರಿ

Updated on: Sep 25, 2026 | 4:13 PM

ಬಿಗ್ ಬಾಸ್ ಮನೆಯಲ್ಲಿ ಈ ವಾರ ಕಳಪೆ ಯಾರು ಎಂಬುದನ್ನು ತೀರ್ಮಾನಿಸಲಾಗಿದೆ. ಕಿರಣ್ ಶಾಸ್ತ್ರಿ ಅವರಿಗೆ ಕಳಪೆ ಪಟ್ಟ ನೀಡಿದ್ದಾರೆ. ಆದ್ದರಿಂದ ಅವರು ಒಂದು ದಿನ ಜೈಲುವಾಸ ಅನುಭವಿಸಬೇಕಾಗಿದೆ. ಕಳಪೆ ಯಾರು ಎಂಬುದನ್ನು ನಿರ್ಧರಿಸುವಾಗ ಕಿರಣ್ ಶಾಸ್ತ್ರಿ ಮೇಲೆ ಹಲವು ಆರೋಪಗಳನ್ನು ಮಾಡಲಾಗಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 13’ ರಿಯಾಲಿಟಿ ಶೋನಲ್ಲಿ ಈ ವಾರ ಕಳಪೆ ಯಾರು ಎಂಬುದನ್ನು ತೀರ್ಮಾನಿಸಲಾಗಿದೆ. ಕಿರಣ್ ಶಾಸ್ತ್ರಿ ಅವರಿಗೆ ಕಳಪೆ ಪಟ್ಟ ನೀಡಿದ್ದಾರೆ. ಆದ್ದರಿಂದ ಅವರು ಒಂದು ದಿನ ಜೈಲುವಾಸ ಅನುಭವಿಸಬೇಕಾಗಿದೆ. ಕಳಪೆ ಯಾರು ಎಂಬುದನ್ನು ನಿರ್ಧರಿಸುವಾಗ ಕಿರಣ್ ಶಾಸ್ತ್ರಿ ಮೇಲೆ ಹಲವು ಆರೋಪಗಳನ್ನು ಮಾಡಲಾಗಿದೆ. ಲಿಖಿತ್, ಅವಿನಾಶ್, ಮಂಜ, ವೈಷ್ಣವಿ, ಸೌಂದರ್ಯಾ ಶೆಟ್ಟಿ ಮುಂತಾದವರು ಕಿರಣ್ ಶಾಸ್ತ್ರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ಕೆಟ್ಟ ಯೋಚನೆ ಇರುವ ಕಳ್ಳ ಕಿರಣ್’ ಎಂದು ಮಂಜ ಅವರು ಖಾರದ ಮಾತುಗಳಲ್ಲಿ ಹೇಳಿದ್ದಾರೆ. ಸೆಪ್ಟೆಂಬರ್ 25ರ ಸಂಚಿಕೆಯ ಪ್ರೋಮೋವನ್ನು ‘ಕಲರ್ಸ್ ಕನ್ನಡ’ ವಾಹಿನಿ ಹಂಚಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More