‘ಮಾಡಿರೋದೇ ಒಂದು ಸಿನಿಮಾ, ಗಂಡಸರ ಹಾಗೆ ನಡೆದುಕೋ; ಜಗ್ಗುಗೆ ಮಂಜು ಅವಾಜ್

Updated on: Nov 17, 2026 | 8:29 AM

‘ಬಿಗ್ ಬಾಸ್ ಕನ್ನಡ ಸೀಸನ್ 13’ರ ಮನೆಯಲ್ಲಿ ಜಗ್ಗಿ ಹಾಗೂ ಮಂಜು ನಡುವೆ ತೀವ್ರ ವಾಗ್ವಾದ ನಡೆದಿದೆ. ಗಾನವಿ ಪರವಾಗಿ ನಿಂತ ಮಂಜು, ಜಗದೀಶ್ ವಿರುದ್ಧ ಸಿಡಿದೆದ್ದು ‘ಮಾಡಿರೋದು ಒಂದೇ ಒಂದು ಸಿನಿಮಾ, ಗಂಡಸರ ಹಾಗೆ ನಡೆದುಕೋ’ ಎಂದು ಖಡಕ್ ಅವಾಜ್ ಹಾಕಿರುವ ಹೊಸ ಪ್ರೋಮೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 13’ರಲ್ಲಿ ಜಗ್ಗಿ ಹಾಗೂ ಮಂಜು ಮಧ್ಯೆ ಜಗಳ ನಡೆದಿದೆ. ಗಾನವಿ ಹಾಗೂ ಜಗ್ಗಿ ಮಧ್ಯೆ ಕಿತ್ತಾಟ ನಡೆದಿದೆ. ಈ ಕಿತ್ತಾಟಕ್ಕೆ ಮಂಜು ಎಂಟ್ರಿ ಆಗಿದೆ. ಗಾನವಿ ಪರ ವಹಿಸಿಕೊಂಡು ಮಾತನಾಡಿದ ಮಂಜು, ಜಗದೀಶ್ ವಿರುದ್ಧ ಸಿಡಿದೆದ್ದಿದ್ದಾರೆ. ‘ಮಾಡಿರೋದು ಒಂದೇ ಒಂದು ಸಿನಿಮಾ. ಗಂಡಸರ ಹಾಗೆ ನಡೆದುಕೋ’ ಎಂದು ಜಗದೀಶ್​​ಗೆ ಮಂಜು ಅವಾಜ್ ಹಾಕಿದ್ದಾರೆ. ಈ ವಿಷಯ ವೀಕೆಂಡ್​​ನಲ್ಲಿ ಚರ್ಚೆಗೆ ಬರೋದು ಫಿಕ್ಸ್​ ಎಂಬ ಮಾತು ಕೇಳಿ ಬರುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More