ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?
‘ಬಿಗ್ ಬಾಸ್ ಕನ್ನಡ ಸೀಸನ್ 13’ ಆರಂಭಕ್ಕೆ ಸಿದ್ಧತೆ ನಡೆಯುತ್ತಿದೆ. ಈ ಸಲ ಸಾಮಾನ್ಯ ಜನರಿಗೂ ಅವಕಾಶ ಸಿಗುತ್ತಿದೆ ಎಂಬುದು. ಲಾಲ್ ಬಾಗ್ ಫ್ಲವರ್ ಶೋನಲ್ಲಿ ಕೂಡ ಬಿಗ್ ಬಾಸ್ ಪ್ರಚಾರ ಮಾಡಲಾಗುತ್ತಿದೆ. ಆಗಸ್ಟ್ 6ರಿಂದ ಶುರುವಾಗಿರುವ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಚೇರ್ ಇರಿಸಲಾಗಿದೆ.
‘ಬಿಗ್ ಬಾಸ್ ಕನ್ನಡ ಸೀಸನ್ 13’ (Bigg Boss Kannada Season 13) ಆರಂಭಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ. ಈ ಬಾರಿ ಸಾಮಾನ್ಯ ಜನರಿಗೂ ಅವಕಾಶ ಸಿಗುತ್ತಿದೆ ಎಂಬುದು ವಿಶೇಷ. ಬಿಗ್ ಬಾಸ್ ಮನೆಗೆ ಎಂಟ್ರಿ ಪಡೆಯಲು ಜನರು ಅಗ್ನಿಪರೀಕ್ಷೆ ಎದುರಿಸಬೇಕಿದೆ. ಅದು ಹೇಗಿರಲಿದೆ ಎಂಬುದನ್ನು ತಿಳಿಯುವ ಕುತೂಹಲ ಎಲ್ಲರಿಗೂ ಇದೆ. ಲಾಲ್ ಬಾಗ್ ಫ್ಲವರ್ ಶೋನಲ್ಲಿ ಕೂಡ ಬಿಗ್ ಬಾಸ್ ಪ್ರಚಾರ ಮಾಡಲಾಗುತ್ತಿದೆ. ಆಗಸ್ಟ್ 6ರಿಂದ ಶುರು ಆಗಿರುವ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಚೇರ್ ಇರಿಸಲಾಗಿದೆ. ಅಲ್ಲಿ ಸೆಲ್ಫಿ ತೆಗೆದುಕೊಂಡು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ‘ಕಲರ್ಸ್ ಕನ್ನಡ’ ವಾಹಿನಿಗೆ ಟ್ಯಾಗ್ ಮಾಡಿದ ಅದೃಷ್ಟಶಾಲಿಗಳಿಗೆ ಒಂದು ಆಫರ್ ನೀಡಲಾಗುತ್ತದೆ. ಕೆಲವು ಚುಟುವಟಿಕೆಗಳನ್ನು ಕೂಡ ಇಲ್ಲಿ ನೀಡಲಾಗುತ್ತಿದೆ. ಆಗಸ್ಟ್ 16ರಿಂದ ಬಿಗ್ ಬಾಸ್ ಅಗ್ನಿಪರೀಕ್ಷೆ ಆರಂಭ ಆಗಲಿದೆ. ಲಾಲ್ ಬಾಗ್ನಲ್ಲಿ ಇರುವ ಬಿಗ್ ಬಾಸ್ ಸೆಲ್ಫಿ ಝೋನ್ ಬಗ್ಗೆ ಈ ವಿಡಿಯೋದಲ್ಲಿ ಮಾಹಿತಿ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
