AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್: ಸೂಪರ್ ಸಂಡೇ ಸಂಚಿಕೆಯಲ್ಲೂ ಮಂಜ, ಗಾನವಿ ಲವ್ ಸ್ಟೋರಿ ಚರ್ಚೆ

ಬಿಗ್ ಬಾಸ್: ಸೂಪರ್ ಸಂಡೇ ಸಂಚಿಕೆಯಲ್ಲೂ ಮಂಜ, ಗಾನವಿ ಲವ್ ಸ್ಟೋರಿ ಚರ್ಚೆ

ಮದನ್​ ಕುಮಾರ್​
|

Updated on:Nov 22, 2026 | 9:31 AM

Share

‘ಬಿಗ್ ಬಾಸ್ ಕನ್ನಡ 13’ ರಿಯಾಲಿಟಿ ಶೋನಲ್ಲಿ ಗಾನವಿ ಅವರು ಮಂಜನ ಜೊತೆ ಆಪ್ತವಾಗಿದ್ದಾರೆ. ಈ ಮೊದಲು ಮಂಜ ಅವರು ಎಲ್ಲರ ವಿರುದ್ಧ ಕಿಡಿಕಾರುತ್ತಿದ್ದರು. ಆದರೆ ಈಗ ಅವರು ಸೌಮ್ಯ ಸ್ವಭಾವದ ವ್ಯಕ್ತಿಯ ರೀತಿ ನಡೆದುಕೊಳ್ಳುತ್ತಿದ್ದಾರೆ. ಗಾನವಿ ಜೊತೆ ಮಧುರವಾದ ಮಾತುಗಳನ್ನು ಆಡುತ್ತಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 13’ ರಿಯಾಲಿಟಿ ಶೋನಲ್ಲಿ ಗಾನವಿ ಅವರು ಮಂಜನ ಜೊತೆ ಆಪ್ತವಾಗಿದ್ದಾರೆ. ಈ ಮೊದಲು ಮಂಜ ಅವರು ಎಲ್ಲರ ವಿರುದ್ಧ ಕಿಡಿಕಾರುತ್ತಿದ್ದರು. ಆದರೆ ಈಗ ಅವರು ಸೌಮ್ಯ ಸ್ವಭಾವದ ವ್ಯಕ್ತಿಯ ರೀತಿ ನಡೆದುಕೊಳ್ಳುತ್ತಿದ್ದಾರೆ. ಗಾನವಿ ಜೊತೆ ಮಧುರವಾದ ಮಾತುಗಳನ್ನು ಆಡುತ್ತಿದ್ದಾರೆ. ಈ ಬದಲಾವಣೆಯನ್ನು ಇಡೀ ಮನೆ ಗಮನಿಸುತ್ತಿದೆ. ಅಲ್ಲದೇ ಕಿಚ್ಚ ಸುದೀಪ್ ಅವರು ಕೂಡ ಈ ಬಗ್ಗೆ ಮಾತನಾಡಿದ್ದಾರೆ. ‘ಹೇಗಿದ್ದ ಮಂಜು ಹೇಗಾದ’ ಎಂದು ಸುದೀಪ್ ಅವರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ‘ಹುಡುಗ ಹೇಗೇ ಇದ್ದರೂ ಕೂಡ ಒಬ್ಬಳು ಹುಡುಗಿ ಬಂದ ಮೇಲೆ ಅವನು ಬದಲಾಗುತ್ತಾನೆ’ ಎಂದು ಗಾನವಿ ಅವರು ನಾಚುತ್ತಾ ಹೇಳಿದ್ದಾರೆ. ಈ ಮಾತು ಕೇಳಿ ಮಂಜ ಕೂಡ ನಾಚಿಕೊಂಡಿದ್ದಾರೆ. ನವೆಂಬರ್ 22ರ ಬಿಗ್ ಬಾಸ್ ಸಂಚಿಕೆಯ ಪ್ರೋಮೋವನ್ನು ‘ಕಲರ್ಸ್ ಕನ್ನಡ’ ಹಂಚಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Nov 22, 2026 09:31 AM

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More