AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಕನ್ನಡ 13: ಕ್ಯಾಪ್ಟನ್ ಆಗಲು ಯೋಗ್ಯತೆ ಇಲ್ಲದ 4 ಸ್ಪರ್ಧಿಗಳು ಯಾರು?

ಬಿಗ್ ಬಾಸ್ ಕನ್ನಡ 13: ಕ್ಯಾಪ್ಟನ್ ಆಗಲು ಯೋಗ್ಯತೆ ಇಲ್ಲದ 4 ಸ್ಪರ್ಧಿಗಳು ಯಾರು?

ಮದನ್​ ಕುಮಾರ್​
|

Updated on: Nov 05, 2026 | 5:25 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 13’ ರಿಯಾಲಿಟಿ ಶೋನಲ್ಲಿ ಈ ವಾರ ಯಾರು ಕ್ಯಾಪ್ಟನ್ ಆಗುತ್ತಾರೆ ಎಂಬುದನ್ನು ತಿಳಿಯಲು ಪ್ರೇಕ್ಷಕರು ಕಾದಿದ್ದಾರೆ. ಕ್ಯಾಪ್ಟೆನ್ಸಿ ಓಟಕ್ಕೆ ಅರ್ಹತೆ ಇರುವ ಸ್ಪರ್ಧಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಅದರಿಂದಾಗಿ ಸ್ಪರ್ಧಿಗಳ ನಡುವೆ ಮನಸ್ತಾಪ ಉಂಟಾಗಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 13’ ರಿಯಾಲಿಟಿ ಶೋನಲ್ಲಿ ಈ ವಾರ ಯಾರು ಕ್ಯಾಪ್ಟನ್ ಆಗುತ್ತಾರೆ ಎಂಬುದನ್ನು ತಿಳಿಯಲು ಪ್ರೇಕ್ಷಕರು ಕಾದಿದ್ದಾರೆ. ಕ್ಯಾಪ್ಟೆನ್ಸಿ ಓಟಕ್ಕೆ ಅರ್ಹತೆ ಇರುವ ಸ್ಪರ್ಧಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈ ವಾರ ಮನೆಯಿಂದ ಬಂದ ಪತ್ರಗಳನ್ನು ಪಡೆದಿರುವ 8 ಸದಸ್ಯರ ಪೈಕಿ ಕ್ಯಾಪ್ಟನ್ ಆಗಲು ಯೋಗ್ಯತೆ ಇಲ್ಲದ 4 ಸ್ಪರ್ಧಿಗಳು ಯಾರು ಎಂಬುದನ್ನು ಈಗ ನಿರ್ಧರಿಸಬೇಕಿದೆ. ಸೋನಿಕಾ ಗೌಡ, ತಾಂಡವ್ ರಾಮ್ ಮತ್ತು ಆಸಿಯಾ ಅವರಿಗೆ ಈ ಅಧಿಕಾರ ನೀಡಲಾಗಿದೆ. ಈ ಮೂವರು ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಆದರೆ ಅವರ ಅನಿಸಿಕೆಗಳನ್ನು ಕೇಳಿಸಿಕೊಂಡ ಬಿಗ್ ಬಾಸ್ ಮನೆಯ ಸದಸ್ಯರು ಗರಂ ಆಗಿದ್ದಾರೆ. ಈ ಮೂವರ ಮೇಲೆ ಕೆಲವರು ಜಗಳಕ್ಕೆ ಬಂದಿದ್ದಾರೆ. ಅದರಿಂದಾಗಿ ಸ್ಪರ್ಧಿಗಳ ನಡುವೆ ಮನಸ್ತಾಪ ಉಂಟಾಗಿದೆ. ಗಗನ್ ಚಿನ್ನಪ್ಪ ಮತ್ತು ಆಸಿಯಾ ನಡುವೆ ವಾಗ್ವಾದ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More