ಬಿಗ್ ಬಾಸ್ ಕನ್ನಡ ಸೀಸನ್ 13: ಮೂವರು ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ಸುದೀಪ್ ಸ್ವಾಗತ

Updated on: Sep 27, 2026 | 1:04 PM

‘ಬಿಗ್ ಬಾಸ್ ಕನ್ನಡ ಸೀಸನ್ 13’ ರಿಯಾಲಿಟಿ ಶೋನಲ್ಲಿ ಮೂವರು ಹೊಸ ಸ್ಪರ್ಧಿಗಳ ಎಂಟ್ರಿ ಆಗಿದೆ. ವೈಲ್ಡ್ ಕಾರ್ಡ್ ಮೂಲಕ ಈ ಸ್ಪರ್ಧಿಗಳು ಬಂದಿದ್ದಾರೆ. ಅವರಿಗೆ ಕಿಚ್ಚ ಸುದೀಪ್ ಸ್ವಾಗತ ಕೋರಿದ್ದಾರೆ. ‘ಕಲರ್ಸ್ ಕನ್ನಡ’ ಹಂಚಿಕೊಂಡ ಭಾನುವಾರದ (ಸೆ.27) ಸಂಚಿಕೆಯ ಪ್ರೋಮೋ ಇಲ್ಲಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 13’ ರಿಯಾಲಿಟಿ ಶೋನಲ್ಲಿ ಮೂವರು ಹೊಸ ಸ್ಪರ್ಧಿಗಳ ಎಂಟ್ರಿ ಆಗಿದೆ. ವೈಲ್ಡ್ ಕಾರ್ಡ್ ಮೂಲಕ ಈ ಸ್ಪರ್ಧಿಗಳು ಬಂದಿದ್ದಾರೆ. ಅವರಿಗೆ ಕಿಚ್ಚ ಸುದೀಪ್ ಅವರು ಸ್ವಾಗತ ಕೋರಿದ್ದಾರೆ. ಭಾನುವಾರದ (ಸೆಪ್ಟೆಂಬರ್ 27) ಸಂಚಿಕೆಯ ಪ್ರೋಮೋವನ್ನು ‘ಕಲರ್ಸ್ ಕನ್ನಡ’ ವಾಹಿನಿ ಹಂಚಿಕೊಂಡಿದೆ. ಈ ಪ್ರೋಮೋದಲ್ಲಿ ಆ ಮೂವರು ಸ್ಪರ್ಧಿಗಳು ಯಾರು ಎಂಬುದನ್ನು ಬಹಿರಂಗಪಡಿಸಿಲ್ಲ. ಸಂಜೆ ಪ್ರಸಾರ ಆಗುವ ಸಂಚಿಕೆಯಲ್ಲಿ ವೈಲ್ಡ್ ಕಾರ್ಡ್ ಸ್ಪರ್ಧಿಗಳ ಬಗ್ಗೆ ಮಾಹಿತಿ ತಿಳಿಯಲಿದೆ. ಒಟ್ಟಿನಲ್ಲಿ ಈ ಸೀಸನ್​ಗೆ ಹೊಸ ಹುರುಪು ನೀಡಲು ಹೊಸ ಸ್ಪರ್ಧಿಗಳನ್ನು ಕರೆತರಲಾಗಿದೆ. ಅವರ ಎಂಟ್ರಿಯಿಂದಾಗಿ ಮನೆಯೊಳಗಿನ ಸ್ಪರ್ಧಿಗಳಿಗೆ ಅಚ್ಚರಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More