ಬಿಗ್ ಬಾಸ್ ಮನೆಯಲ್ಲಿ ಮತ್ತೆ ಓಪನ್ ಆಯ್ತು ಆರ್ಯವರ್ಧನ್ ಗುರೂಜಿ ಹೋಟೆಲ್
ಈಗ ಹೋಟೆಲ್ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಇದರ ಪ್ರೋಮೋವನ್ನು ಕಲರ್ಸ್ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.

Bigg Boss Kannada
‘ಬಿಗ್ ಬಾಸ್’ (Bigg Boss) ಮನೆಯಲ್ಲಿ ಹೋಟೆಲ್ ವಿಚಾರ ಇಟ್ಟುಕೊಂಡು ಕಿಚ್ಚ ಸುದೀಪ್ ಅವರು ಕಾಲೆಳೆದಿದ್ದರು. ಆರ್ಯವರ್ಧನ್ ಗುರೂಜಿ, ರೂಪೇಶ್ ಶೆಟ್ಟಿ, ರೂಪೇಶ್ ರಾಜಣ್ಣ ಒಂದು ಗುಂಪಾದರೆ ರಾಕೇಶ್ ಅಡಿಗ (Rakesh Adiga), ಅಮೂಲ್ಯ ಗೌಡ ಇತರರು ಒಂದು ಗುಂಪಾಗಿ ಗುರುತಿಸಿಕೊಂಡಿದ್ದಾರೆ. ಈ ಗುಂಪನ್ನು ಹೋಟೆಲ್ ಎಂದು ಕರೆದಿದ್ದರು ಸುದೀಪ್. ಈಗ ಹೋಟೆಲ್ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಇದರ ಪ್ರೋಮೋವನ್ನು ಕಲರ್ಸ್ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.