‘ಕನ್ನಡ ಚಿತ್ರರಂಗ ಉದ್ಧಾರ ಮಾಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ’; ರೂಪೇಶ್ ಶೆಟ್ಟಿ ನೇರಮಾತು
‘ಮಂಕು ಭಾಯ್ ಫಾಕ್ಸಿ ರಾಣಿ’ ಚಿತ್ರದ ಟ್ರೈಲರ್ ರಿಲೀಸ್ ಆಗಿದೆ. ಈ ಕಾರ್ಯಕ್ರಮದಲ್ಲಿ ಅವರು ಒಂದು ವಿಚಾರಕ್ಕೆ ಸ್ಪಷ್ಟನೆ ನೀಡಿದ್ದಾರೆ. ‘ತುಳು ಚಿತ್ರರಂಗಕ್ಕೆ ಸಹಾಯ ಮಾಡುತ್ತೇನೆ’ ಎಂದು ಅವರು ಹೇಳಿದ್ದರು. ಇದರಿಂದ ಅನೇಕ ಕನ್ನಡಿಗರಿಗೆ ಬೇಸರ ಆಗಿತ್ತು.
ರೂಪೇಶ್ ಶೆಟ್ಟಿ (Roopesh Shetty) ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ ಗೆಲುವು ಕಂಡಿದ್ದಾರೆ. ರೂಪೇಶ್ ಶೆಟ್ಟಿ ಹಾಗೂ ಗೀತಾ ಭಾರತಿ ಭಟ್ (Geetha Bharati Bhat) ಮುಖ್ಯ ಭೂಮಿಕೆಯಲ್ಲಿ ನಟಿಸಿದ ‘ಮಂಕು ಭಾಯ್ ಫಾಕ್ಸಿ ರಾಣಿ’ ಚಿತ್ರದ ಟ್ರೈಲರ್ ಆಗಿದೆ. ಈ ಕಾರ್ಯಕ್ರಮದಲ್ಲಿ ಅವರು ಒಂದು ವಿಚಾರಕ್ಕೆ ಸ್ಪಷ್ಟನೆ ನೀಡಿದ್ದಾರೆ. ‘ತುಳು ಚಿತ್ರರಂಗಕ್ಕೆ ಸಹಾಯ ಮಾಡುತ್ತೇನೆ’ ಎಂದು ಅವರು ಹೇಳಿದ್ದರು. ಇದರಿಂದ ಅನೇಕ ಕನ್ನಡಿಗರಿಗೆ ಬೇಸರ ಆಗಿತ್ತು. ‘ನಾನು ತುಳು ಚಿತ್ರರಂಗದ ಪರವಾಗಿ ಮಾತ್ರ ನಿಲ್ಲುತ್ತೇನೆ ಎಂದು ಹೇಳಿಲ್ಲ. ಕನ್ನಡ ಸಿನಿಮಾಗಳಲ್ಲೂ ನಟಿಸುತ್ತೇನೆ. ಆದರೆ, ಕನ್ನಡ ಚಿತ್ರರಂಗ ಉದ್ಧಾರ ಮಾಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ’ ಎಂದಿದ್ದಾರೆ ರೂಪೇಶ್.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ