‘ಯೋಗ್ಯತೆ ಇದ್ದರೆ ಎದೆಗೆ ಒದ್ದು ನೋಡು’; ಮತ್ತೆ ಕೂಗಾಟಕ್ಕೆ ಇಳಿದ ವಿನಯ್

Updated on: Jan 01, 2024 | 9:21 AM

‘ಯೋಗ್ಯತೆ ಇದ್ದರೆ ಎದೆಗೆ ಒದ್ದು ನೋಡು’ ಎಂದು ವಿನಯ್ ಆವಾಜ್ ಹಾಕಿದ್ದಾರೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಈ ಎಪಿಸೋಡ್ ಪ್ರಸಾರ ಕಾಣಲಿದೆ.

ವಿನಯ್ ಗೌಡ ಅವರು ಬಿಗ್ ಬಾಸ್ (Bigg Boss) ಮನೆಯಲ್ಲಿ ಕಳೆದ ಎರಡು ವಾರಗಳಿಂದ ಸೈಲೆಂಟ್ ಆಗಿದ್ದರು. ಈಗ ದೊಡ್ಮನೆಯಲ್ಲಿ ಅವರು ಮತ್ತೆ ಫಾರ್ಮ್​ಗೆ ಮರಳಿದ್ದಾರೆ. ತಮ್ಮ ಬೆಲೆಯನ್ನು ನಿಗದಿ ಮಾಡಿಕೊಳ್ಳಲು ಬಿಗ್ ಬಾಸ್ ಅವಕಾಶ ನೀಡಿದ್ದರು. ಕೆಲವರು ಎರಡು ಲಕ್ಷಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ವೇಳೆ ವಿನಯ್, ಕಾರ್ತಿಕ್, ಸಂಗೀತಾ ಹಾಗೂ ತನಿಷಾ ಮಧ್ಯೆ ಕಿತ್ತಾಟ ನಡೆದಿದೆ. ಯೋಗ್ಯತೆಯ ವಿಚಾರವನ್ನು ತನಿಷಾ ಮಾತನಾಡಿದ್ದಾರೆ. ‘ಯೋಗ್ಯತೆ ಇದ್ದರೆ ಎದೆಗೆ ಒದ್ದು ನೋಡು’ ಎಂದು ವಿನಯ್ ಆವಾಜ್ ಹಾಕಿದ್ದಾರೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಈ ಎಪಿಸೋಡ್ ಪ್ರಸಾರ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More