AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಇಲ್ಲ ಎಲಿಮಿನೇಷನ್? ಪ್ರೋಮೋ ಮೂಲಕ ಸೂಚನೆ ಕೊಟ್ಟ ಬಿಗ್ ಬಾಸ್

ಈ ವಾರ ಇಲ್ಲ ಎಲಿಮಿನೇಷನ್? ಪ್ರೋಮೋ ಮೂಲಕ ಸೂಚನೆ ಕೊಟ್ಟ ಬಿಗ್ ಬಾಸ್

ರಾಜೇಶ್ ದುಗ್ಗುಮನೆ
|

Updated on:Nov 07, 2026 | 8:55 AM

Share

ಬಿಗ್ ಬಾಸ್ ಕನ್ನಡ ಮನೆಯಲ್ಲಿ ಈ ವಾರ ಎಲಿಮಿನೇಷನ್ ಇರುವುದಿಲ್ಲ ಎಂಬ ಚರ್ಚೆ ಜೋರಾಗಿದೆ. ಕುಟುಂಬಸ್ಥರ ಪತ್ರಗಳು ಮತ್ತು ಭಾವನಾತ್ಮಕ ಸನ್ನಿವೇಶಗಳಿರುವ ಹೊಸ ಪ್ರೋಮೋ ಬಿಡುಗಡೆಯಾಗಿದ್ದು, ವೋಟಿಂಗ್ ಅಥವಾ ನಿರ್ಗಮನದ ಯಾವುದೇ ಸುಳಿವು ನೀಡಲಾಗಿಲ್ಲ. ಇಂದಿನ ರಾತ್ರಿಯ ಸಂಚಿಕೆಯಲ್ಲಿ ಇದಕ್ಕೆ ಸ್ಪಷ್ಟನೆ ಸಿಗಲಿದೆ ಎಂದು ನಿರೀಕ್ಷಿಸಲಾಗಿದೆ.

ಬಿಗ್ ಬಾಸ್ ಕನ್ನಡ ಮನೆಯಲ್ಲಿ ಈ ವಾರದ ಎಲಿಮಿನೇಷನ್ ಬಗ್ಗೆ ಪ್ರೇಕ್ಷಕರಲ್ಲಿ ಭಾರೀ ಕುತೂಹಲ ಮೂಡಿದೆ. ಪ್ರತಿ ವಾರ ಶನಿವಾರದ ಸಂಚಿಕೆಗೂ ಮುನ್ನ ಪ್ರೋಮೋದಲ್ಲಿ ನಾಮಿನೇಟ್ ಆದವರು ಯಾರು, ಎಲಿಮಿನೇಟ್ ಆಗೋರು ಯಾರು ಎಂದು ಪ್ರಶ್ನೆ ಮಾಡುವಂತ ಪ್ರೋಮೋ ಬಿಡಲಾಗುತ್ತಿತ್ತು. ಆದರೆ ಈ ಬಾರಿ ಬಿಡುಗಡೆಯಾಗಿರುವ ಪ್ರೋಮೋದಲ್ಲಿ ಅದಕ್ಕೆ ಭಿನ್ನವಾದ ದೃಶ್ಯಗಳು ಕಂಡುಬಂದಿವೆ. ಅಲ್ಲದೆ, ಈ ವಾರ ವೋಟಿಂಗ್ ಇಲ್ಲ. ಇದರಿಂದ ಈ ವಾರ ಮನೆಯಿಂದ ಯಾರೂ ಹೊರಹೋಗುವುದಿಲ್ಲ ಎಂಬ ಚರ್ಚೆ ಜೋರಾಗಿ ನಡೆಯುತ್ತಿದೆ.

ಈ ವಾರ ಮನೆಯ ಸದಸ್ಯರ ಪತ್ರಗಳನ್ನು ಓದಿ ಭಾವುಕರಾಗಿದ್ದಾರೆ. ಕೆಲವರ ನಡುವೆ ಮನಸ್ತಾಪ ಹಾಗೂ ಮಾತಿನ ಚಕಮಕಿ ಕೂಡ ನಡೆದಿದೆ. ಅಕ್ಷರಗಳ ಆಟದ ಮೂಲಕ ಸ್ಪರ್ಧಿಗಳ ಭಾವನೆಗಳನ್ನು ಬಡಿದೆಬ್ಬಿಸುವ ಪ್ರಯತ್ನ ಮಾಡಲಾಗಿದೆ. ಶನಿವಾರದ ಸಂಚಿಕೆಯಲ್ಲಿ ಸುದೀಪ್ ಅವರು ಯಾವ ವಿಚಾರಗಳನ್ನು ಪ್ರಸ್ತಾಪಿಸಲಿದ್ದಾರೆ ಎಂಬ ಕಾತರ ಹೆಚ್ಚಾಗಿದೆ. ಇಂದು ರಾತ್ರಿ ಒಂಬತ್ತು ಗಂಟೆಗೆ ಪ್ರಸಾರವಾಗುವ ಸಂಚಿಕೆಯಲ್ಲಿ ಎಲ್ಲ ಸಂಗತಿಗಳು ಬಹಿರಂಗಗೊಳ್ಳಲಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Published on: Nov 07, 2026 08:54 AM

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More