AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್ ಮನೆಯ ಫೇಕ್ ಸ್ಪರ್ಧಿ ಯಾರು? ಊಸರವಳ್ಳಿ ಯಾರು?

ಬಿಗ್​ಬಾಸ್ ಮನೆಯ ಫೇಕ್ ಸ್ಪರ್ಧಿ ಯಾರು? ಊಸರವಳ್ಳಿ ಯಾರು?

ಮಂಜುನಾಥ ಸಿ.
|

Updated on: Nov 10, 2024 | 8:17 AM

Share

Bigg Boss Kannada: ಬಿಗ್​ಬಾಸ್ ಮನೆಯಲ್ಲಿ ಎಲ್ಲ ಸ್ಪರ್ಧಿಗಳು ಪರಸ್ಪರ ಚೆನ್ನಾಗಿರುವಂತೆ ತೋರಿಸಿಕೊಳ್ಳುತ್ತಾರೆ. ಆದರೆ ಮನದ ಒಳಗೆ ಬೇರೆ ಅಭಿಪ್ರಾಯ ಇಟ್ಟುಕೊಂಡಿರುತ್ತಾರೆ.

ಬಿಗ್​ಬಾಸ್ ಕನ್ನಡ ಮನೆಯಲ್ಲಿ ಆಟ ನಿಧಾನಕ್ಕೆ ಶುರುವಾಗಿದೆ. ಆರಂಭದ ಕೆಲ ವಾರಗಳಲ್ಲಿ ಬರೀ ಕಿತ್ತಾಟ, ಜಗಳ, ಬೈಗುಗಳಲ್ಲೇ ಕಾಲ ಕಳೆದಿದ್ದ ಮನೆಯ ಸದಸ್ಯರು ಈಗ ಆಟವನ್ನು ತುಸು ಗಂಭೀರವಾಗಿ ಪರಿಗಣಿಸಿದಂತಿದೆ. ಟಾಸ್ಕ್​ಗಳನ್ನು ಗೆಲ್ಲಲು ಯೋಜನೆಗಳನ್ನು, ತಂತ್ರಗಳನ್ನು, ರಾಜಕೀಯವನ್ನು ಮಾಡುತ್ತಿದ್ದಾರೆ. ಕೆಲವರಂತೂ ಗುಂಪುಗಳನ್ನು ಮಾಡಿಕೊಂಡು ಗೆಲುವಿನ ಕಡೆ ದೃಷ್ಟಿ ನೆಟ್ಟಿದ್ದಾರೆ. ಮನೆಯ ಎಲ್ಲ ಸದಸ್ಯರು ಇನ್ನೊಬ್ಬರ ಬಗ್ಗೆ ಮೇಲ್ನೋಟಕ್ಕೆ ಒಳ್ಳೆಯ ಮಾತುಗಳನ್ನು ಆಡುತ್ತಿದ್ದರೂ ಸಹ ಒಳಗೆ ಬೇರೆಯದ್ದೇ ಅಭಿಪ್ರಾಯ ಹೊಂದಿದ್ದಾರೆ. ಇದೀಗ ಸುದೀಪ್ ಆ ಅಭಿಪ್ರಾಯಗಳನ್ನು ಹೊರಗೆ ಎಳೆದಿದ್ದಾರೆ. ಭಾನುವಾರದ ಎಪಿಸೋಡ್​ನಲ್ಲಿ, ಮನೆಯ ಫೇಕ್ ಸ್ಪರ್ಧಿ ಯಾರು? ಮನೆಯ ಊಸರವಳ್ಳಿ ಯಾರು? ಎಂದು ಸ್ಪರ್ಧಿಗಳು ತಮ್ಮ ಅಭಿಪ್ರಾಯ ಹೊರಹಾಕಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More