ಈ ವಾರ ಬಿಗ್ ಬಾಸ್ ಮನೆಯಿಂದ ಹೊರಹೋಗುವುದು ಯಾರು?

Edited By:

Updated on: Nov 29, 2025 | 10:53 AM

Bigg Boss: ಬಿಗ್ ಬಾಸ್​ನಲ್ಲಿ ಈ ವಾರ ಅನೇಕರು ನಾಮಿನೇಟ್ ಆಗಿದ್ದಾರೆ. ಇವರ ಪೈಕಿ ಹೊರಹೋಗೋದು ಯಾರು ಎಂಬ ಪ್ರಶ್ನೆ ಮೂಡಿದೆ. ಈ ಸಂದರ್ಭದ ಪ್ರೋಮೋನ ಕಲರ್ಸ್ ಕನ್ನಡ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಯಾರು ಈ ವಾರ ನಾಮಿನೇಟ್ ಆಗಿದ್ದರು? ಇಲ್ಲಿದೆ ವಿವರ.

ಈ ವಾರ ಬಿಗ್ ಬಾಸ್ ಮನೆಯಲ್ಲಿ ರಘು, ದ್ರುವಂತ್, ಅಶ್ವಿನಿ ಗೌಡ, ಮಾಳು, ಜಾನ್ವಿ, ಕಾವ್ಯಾ ಹಾಗೂ ಗಿಲ್ಲಿ ನಾಮಿನೇಟ್ ಆಗಿದ್​ದಾರೆ. ಎಲ್ಲರೂ ಈ ವಾರ ಉತ್ತಮವಾಗಿ ಆಟ ಆಡುತ್ತಿದ್ದಾರೆ. ಇವರ ಪೈಕಿ ಒಬ್ಬರು ಎಲಿಮಿನೇಟ್ ಆಗೋದು ಪಕ್ಕಾ. ಅತಿಥಿಗಳು ಬಂದಿರುವುದರಿಂದ ಯಾರನ್ನು ಎಲಿಮಿನೇಷನ್ ಮಾಡದೆಯೂ ಇರಬಹುದು ಎಂದು ಹೇಳಲಾಗುತ್ತಾ ಇದೆ. ಯಾರು ಹೊರ ಹೋಗುತ್ತಾರೆ? ಈ ಪ್ರಶ್ನೆಗೆ ಭಾನುವಾರ ಉತ್ತರ ಸಿಗಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More