ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಮೊದಲ ವಾರವೇ ಸುಸ್ತು?

Updated on: Sep 30, 2026 | 8:35 AM

ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟಿದ್ದ ಗಾನವಿ ಗೌಡ ಮೊದಲ ವಾರದಲ್ಲೇ ಹಿನ್ನಡೆ ಅನುಭವಿಸಿದ್ದಾರೆ. ಟಾಸ್ಕ್ ವಿಚಾರದಲ್ಲಿ ಸ್ವಂತ ತಂಡದವರೊಂದಿಗೇ ವೈರತ್ವ ಕಟ್ಟಿಕೊಂಡಿದ್ದು, ಅವರ ಸಹಸ್ಪರ್ಧಿಗಳೇ ಆಕೆಯ ವಿರುದ್ಧ ತಿರುಗಿಬಿದ್ದಿದ್ದಾರೆ. ಇದರಿಂದ ಗಾನವಿ ಗೌಡ ಬಿಗ್ ಬಾಸ್ ಆಟದ ಆರಂಭದಲ್ಲೇ ಸುಸ್ತಾದಂತೆ ಕಾಣಿಸುತ್ತಿದ್ದಾರೆ.

ಬಿಗ್ ಬಾಸ್ ಉಳಿದ ರಿಯಾಲಿಟಿ ಶೋಗಳಂತೆ ಅಲ್ಲ ಎಂಬುದು ಪದೇ ಪದೇ ಸಾಬೀತಾಗುತ್ತದೆ. ಉಳಿದ ಶೋಗಳಲ್ಲಿ ಅದ್ಭುತ ಆಟ ಪ್ರದರ್ಶನ ನೀಡಿ ಬಂದವರು ಇಲ್ಲಿ ನಡುಗಿ ಹೋದ ಸಾಕಷ್ಟು ಉದಾಹರಣೆ ಇದೆ. ಈಗ ಗಾನವಿ ಗೌಡ ಕೂಡ ಇದೇ ಸಾಲಿಗೆ ಸೇರುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ. ಹಳ್ಳಿ ಪವರ್ ಶೋನಲ್ಲಿ ಪವರ್​ಫುಲ್ ಆಟ ಪ್ರದರ್ಶನ ನೀಡಿದ್ದರು ಗಾನವಿ. ಈಗ ಬಿಗ್ ಬಾಸ್​​ನಲ್ಲಿ ವೈಲ್ಡ್ ಕಾರ್ಡ್ ಮೂಲಕ ಅವರ ಎಂಟ್ರಿ ಆಗಿದೆ. ಇವರು ಮೊದಲ ವಾರವೇ ಸುಸ್ತಾದರೇ ಎನ್ನುವ ಪ್ರಶ್ನೆ ಮೂಡಿದೆ. ಅವರ ವಿರುದ್ಧ ಅವರದ್ದೇ ತಂಡವೇ ನಿಂತಿದೆ. ಟಾಸ್ಕ್ ಆಡುವ ವಿಷಯಕ್ಕೆ ನಡೆದ ಕಿರಕ್​ನಲ್ಲಿ ಅವರು ಸುಸ್ತಾದರೇ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More