ಬಿಗ್ ಬಾಸ್ ವಿನ್ನರ್ ಹನುಮಂತಗೆ ಹುಟ್ಟೂರಲ್ಲಿ ಭರ್ಜರಿ ಸ್ವಾಗತ

Updated on: Jan 30, 2025 | 1:04 PM

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ವೈಲ್ಡ್ ಕಾರ್ಡ್ ಮೂಲಕ ಬಂದವರು ಗೆದ್ದಿದ್ದೇ ಇಲ್ಲ. ಆದರೆ, ಹನುಮಂತ ಅವರು ಈ ರೀತಿಯ ಸಾಧನೆ ಮಾಡಿದ್ದರು. ಅವರು ಗೆದ್ದು ಇತಿಹಾಸ ಬರೆದಿದ್ದಾರೆ. ಅವರು ಈಗ ಹುಟ್ಟೂರಿಗೆ ಬಂದಿದ್ದು ಅದ್ದೂರಿ ಸ್ವಾಗತ ಪಡೆದಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗಿದೆ.

ಹನುಮಂತ ಅವರು ಹುಟ್ಟಿದ್ದು ಹಾವೇರಿಯ ಚಿಲ್ಲೂರಬಡ್ನಿಯಲ್ಲಿ. ಅವರು ಕಪ್ ಗೆದ್ದ ಬಳಿಕ ಇದೇ ಮೊದಲ ಬಾರಿಗೆ ಊರಿಗೆ ಮರಳಿದ್ದಾರೆ. ಸವಣೂರು ಪಟ್ಟಣದಿಂದ ಊರಿನವರೆಗೆ 10 ಕಿಮೀ ರೋಡ್ ಶೋ ಮಾಡಿದ್ದಾರೆ. ಅವರು ರೋಡ್​ಶೋ ವೇಳೆ ಸನ್​ ರೂಫ್ ಮೂಲಕ ಹೊರ ಬಂದು ಅಭಿಮಾನಿಗಳತ್ತ ಕೈ ಬೀಸಿದ್ದಾರೆ. ಹಳ್ಳಿಗರ ಪ್ರೀತಿ ನೋಡಿ ಹನುಮಂತ ಖುಷಿಪಟ್ಟರೆ, ಬಿಗ್ ಬಾಸ್ ವಿನ್ನರ್​ನ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More