Karthik Mahesh: ಅಪ್ಪು ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಿದ ಕಾರ್ತಿಕ್ ಮಹೇಶ್

Updated on: Feb 05, 2024 | 2:12 PM

ಕಾರ್ತಿಕ್ ಮಹೇಶ್ ಬಿಡುವು ಮಾಡಿಕೊಂಡು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ರಾಜ್​ಕುಮಾರ್ ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಕೆ ಮಾಡಿದ್ದಾರೆ. ಪುನೀತ್ ಅವರು ಅನೇಕರಿಗೆ ಮಾದರಿ. ಈ ಕಾರಣಕ್ಕೆ ಅವರ ಸಮಾಧಿಗೆ ಕಾರ್ತಿಕ್ ಭೇಟಿ ಕೊಟ್ಟಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಕಾರ್ತಿಕ್ ಮಹೇಶ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ (BBk 10) ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಇದಾದ ಬಳಿಕ ಅವರು ನಾನಾ ಕಡೆ ಭೇಟಿ ನೀಡುತ್ತಿದ್ದಾರೆ. ಹಲವು ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಕೆಲವು ಸಿನಿಮಾ ಕಾರ್ಯಕ್ರಮಗಳಿಗೂ ಅವರಿಗೆ ಆಹ್ವಾನ ಬರುತ್ತಿದೆ. ಈಗ ಅವರು ಬಿಡುವು ಮಾಡಿಕೊಂಡು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ರಾಜ್​ಕುಮಾರ್ ಅವರ ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಿದ್ದಾರೆ. ಪುನೀತ್ ಅವರು ಅನೇಕರಿಗೆ ಮಾದರಿ. ಈ ಕಾರಣಕ್ಕೆ ಅವರ ಸಮಾಧಿಗೆ ಕಾರ್ತಿಕ್ ಭೇಟಿ ನೀಡಿದ್ದಾರೆ. ಕಾರ್ತಿಕ್ ಅವರು ‘ಬಿಗ್ ಬಾಸ್’ನಲ್ಲಿ ಸಾಕಷ್ಟು ಗಮನ ಸೆಳೆದರು. 112 ದಿನಗಳ ಕಾಲ ಅವರು ದೊಡ್ಮನೆಯಲ್ಲಿ ಇದ್ದು ಕಪ್ ಗೆದ್ದಿದ್ದಾರೆ. ಇದರ ಜೊತೆಗೆ ಒಂದು ಬೈಕ್ ಹಾಗೂ ಕಾರು ಕೂಡ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More