ನಿಮ್ಮ ಮಕ್ಕಳಿಗೆ ಸಿಎಂ, ಪ್ರಧಾನಿ ಹುದ್ದೆ ಖಾಲಿಯಿಲ್ಲ; ಲಾಲು ಯಾದವ್, ಸೋನಿಯಾ ಗಾಂಧಿಯನ್ನು ಅಣಕಿಸಿದ ಅಮಿತ್ ಶಾ
ಬಿಹಾರದಲ್ಲಿ ಇಂದು ಚುನಾವಣಾ ಪ್ರಚಾರ ನಡೆಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಹಾರ ಮುಖ್ಯಮಂತ್ರಿ ಸ್ಥಾನ, ಪ್ರಧಾನಿ ಹುದ್ದೆಗಳು ನಿಮ್ಮ ಪುತ್ರರಿಗೆ ಖಾಲಿ ಇಲ್ಲ ಎಂದು ಲಾಲು ಪ್ರಸಾದ್ ಯಾದವ್ ಹಾಗೂ ಸೋನಿಯಾ ಗಾಂಧಿ ಅವರನ್ನು ಅಣಕಿಸಿದ್ದಾರೆ. ಸೋನಿಯಾ ಗಾಂಧಿ ತಮ್ಮ ಮಗ ರಾಹುಲ್ ಗಾಂಧಿಯನ್ನು ಪ್ರಧಾನಿಯನ್ನಾಗಿ ಮಾಡಲು ಬಯಸುತ್ತಾರೆ. ಆದರೆ, ಆ ಎರಡೂ ಹುದ್ದೆಗಳು ಖಾಲಿ ಇಲ್ಲ ಎಂದು ನಾನು ಅವರಿಗೆ ತಿಳಿಸಲು ಬಯಸುತ್ತೇನೆ ಎಂದು ಅಮಿತ್ ಶಾ ಲೇವಡಿ ಮಾಡಿದ್ದಾರೆ.
ಪಾಟ್ನಾ, ಅಕ್ಟೋಬರ್ 29: ಬಿಹಾರದ ದರ್ಭಾಂಗಾದಲ್ಲಿ ಇಂದು ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah), ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮತ್ತು ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ತಮ್ಮ ಪುತ್ರರನ್ನು ಬಿಹಾರದ (Bihar) ಮುಖ್ಯಮಂತ್ರಿ ಮತ್ತು ಭಾರತದ ಪ್ರಧಾನಿಯನ್ನಾಗಿ ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಆ ಎರಡೂ ಹುದ್ದೆಗಳು ಖಾಲಿ ಇಲ್ಲ ಎಂದು ಅಣಕಿಸಿದ್ದಾರೆ.
“ಬಿಜೆಪಿ ಬಿಹಾರ ವಿಧಾನಸಭಾ ಚುನಾವಣೆಗೆ ಅನೇಕ ಯುವಕರಿಗೆ ಟಿಕೆಟ್ ನೀಡಿದೆ. ಆದರೆ ಆರ್‌ಜೆಡಿ ಮತ್ತು ಕಾಂಗ್ರೆಸ್ ಯುವಕರಿಗೆ ಟಿಕೆಟ್ ನೀಡಿಲ್ಲ. ಲಾಲೂ ಪ್ರಸಾದ್ ಯಾದವ್ ತಮ್ಮ ಮಗ ತೇಜಸ್ವಿ ಯಾದವ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ಬಯಸುತ್ತಾರೆ. ಸೋನಿಯಾ ಗಾಂಧಿ ತಮ್ಮ ಮಗ ರಾಹುಲ್ ಗಾಂಧಿಯನ್ನು ಪ್ರಧಾನಿಯನ್ನಾಗಿ ಮಾಡಲು ಬಯಸುತ್ತಾರೆ. ಆದರೆ, ಆ ಎರಡೂ ಹುದ್ದೆಗಳು ಖಾಲಿ ಇಲ್ಲ ಎಂದು ನಾನು ಅವರಿಗೆ ತಿಳಿಸಲು ಬಯಸುತ್ತೇನೆ” ಎಂದು ಅಮಿತ್ ಶಾ ಲೇವಡಿ ಮಾಡಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

