ವಿಧಾನಸಭೆಯಲ್ಲಿ ಆರ್‌ಜೆಡಿ ಶಾಸಕರು ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ಸ್ಪೀಕರ್ ನಂದ ಕಿಶೋರ್ ಯಾದವ್ ಅವರನ್ನು ಇದಕ್ಕೆ ತಡೆಯೊಡ್ಡುವಂತೆ ಒತ್ತಾಯಿಸಿದ ಸಿಎಂ ನಿತೀಶ್ ಕುಮಾರ್, "ಏನು ನಡೆಯುತ್ತಿದೆ? ಈ ನಿಯಮ 5-6 ವರ್ಷಗಳಿಂದ ಇದೆ. ಅವರಿಗೆ ನೆನಪಿಸಿ. ಯಾರಾದರೂ ಸದನದೊಳಗೆ ಮೊಬೈಲ್ ಬಳಸಿದರೆ ಅವರನ್ನು ಹೊರಗೆ ಕಳುಹಿಸಿ. ನಾನು ಕೂಡ ತುಂಬ ಮೊಬೈಲ್ ಅನ್ನು ಬಳಸುತ್ತಿದ್ದೆ. ಆದರೆ, ಅದರ ಅಡ್ಡ ಪರಿಣಾಮ ತಿಳಿದ ಮೇಲೆ ಈಗ ಮೊಬೈಲ್ ಬಳಕೆ ಕಡಿಮೆ ಮಾಡಿದ್ದೇನೆ ಎಂದು ಬಿಹಾರ ಸಿಎಂ ಹೇಳಿದರು.
ಪಾಟ್ನಾ, ಮಾರ್ಚ್ 20: ವಿಧಾನಸಭೆ ಅಧಿವೇಶನ ನಡೆಯುವಾಗ ಮೊಬೈಲ್ ಫೋನ್‌ಗಳನ್ನು ಬಳಸಲು ಅನುಮತಿ ಇಲ್ಲ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಇಂದು ರಾಜ್ಯ ವಿಧಾನಸಭಾ ಅಧಿವೇಶನದ ಪ್ರಶ್ನೋತ್ತರ ಅವಧಿಯಲ್ಲಿ ಆರ್ ಜೆಡಿ ಶಾಸಕರೊಬ್ಬರು ಮೊಬೈಲ್ ಫೋನ್ ಬಳಸಿದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಆರ್‌ಜೆಡಿ ಶಾಸಕ ಸುಗಯ್ ಯಾದವ್ ತಮ್ಮ ಮೊಬೈಲ್ ಫೋನ್‌ನಲ್ಲಿ ಮೆಸೇಜ್ ಓದುತ್ತಿರುವಾಗ ವಿಧಾನಸಭೆಯಲ್ಲಿ ಪ್ರಶ್ನೆ ಕೇಳುತ್ತಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್ ಅಧಿವೇಶನದ ಸಮಯದಲ್ಲಿ ಫೋನ್‌ಗಳನ್ನು ಬಳಸಲು ಅನುಮತಿ ಇಲ್ಲ ಎಂದು ಶಾಸಕರಿಗೆ ನೆನಪಿಸಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos

‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಜ್ಞಾವಿಧಿ

ಟಿವಿ9 ಎಕ್ಸ್ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?

ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್

ಸರ್ಕಾರದ ಕ್ರಮವನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
