Video: ಎರಡೆರಡು ವೋಟರ್ ಐಡಿ, ಆಯೋಗದಿಂದ ನೋಟಿಸ್, ಬಿಹಾರ ಡಿಸಿಎಂ ವಿಜಯ್ ಹೇಳಿದ್ದೇನು?
ಎರಡು ಮತದಾರರ ಗುರುತಿನ ಚೀಟಿಗಳನ್ನು ಹೊಂದಿದ್ದು, ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಕ್ಕಾಗಿ ಚುನಾವಣಾ ಆಯೋಗವು ಬಿಹಾರ ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ಅವರಿಗೆ ನೋಟಿಸ್ ಕಳುಹಿಸಿದೆ.ಇದಕ್ಕೆ ವಿಜಯ್ ಪ್ರತಿಕ್ರಿಯಿಸಿದ್ದು, ಚುನಾವಣಾ ಆಯೋಗದ ನೋಟಿಸ್‌ಗೆ ನಾನು ಖಂಡಿತವಾಗಿಯೂ ಉತ್ತರಿಸುತ್ತೇನೆ.ಸಂವಿಧಾನದ ಮೇಲೆ ನಂಬಿಕೆ ಇದೆ ಎಂದಷ್ಟೇ ಹೇಳಿದ್ದಾರೆ. ಆಗಸ್ಟ್ 14ರ ಒಳಗೆ ಲಿಖಿತ ಉತ್ತರ ನೀಡುವಂತೆ ಚುನಾವಣಾ ಆಯೋಗ ಕೇಳಿದೆ.
ಪಾಟ್ನಾ, ಆಗಸ್ಟ್ 11: ಎರಡು ಮತದಾರರ ಗುರುತಿನ ಚೀಟಿಗಳನ್ನು ಹೊಂದಿದ್ದು, ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಕ್ಕಾಗಿ ಚುನಾವಣಾ ಆಯೋಗವು ಬಿಹಾರ ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ಅವರಿಗೆ ನೋಟಿಸ್ ಕಳುಹಿಸಿದೆ.ಇದಕ್ಕೆ ವಿಜಯ್ ಪ್ರತಿಕ್ರಿಯಿಸಿದ್ದು, ಚುನಾವಣಾ ಆಯೋಗದ ನೋಟಿಸ್‌ಗೆ ನಾನು ಖಂಡಿತವಾಗಿಯೂ ಉತ್ತರಿಸುತ್ತೇನೆ.ಸಂವಿಧಾನದ ಮೇಲೆ ನಂಬಿಕೆ ಇದೆ ಎಂದಷ್ಟೇ ಹೇಳಿದ್ದಾರೆ. ಆಗಸ್ಟ್ 14ರ ಒಳಗೆ ಲಿಖಿತ ಉತ್ತರ ನೀಡುವಂತೆ ಚುನಾವಣಾ ಆಯೋಗ ಕೇಳಿದೆ.
ಇತ್ತೀಚಿನ ದಿನಗಳಲ್ಲಿ ಮತ ಕಳ್ಳತನದ ಬಗ್ಗೆ ಆರೋಪಗಳು ಕೇಳಿಬಂದಿವೆ. ಬೆಂಗಳೂರಿನ ಮಹಾದೇವಪುರ ಕ್ಷೇತ್ರದಲ್ಲಿ ಮತ ಕಳವು ನಡೆದಿದೆ ಎಂದು ಆರೋಪಿಸಿ ಇತ್ತೀಚೆಗಷ್ಟೇ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ದಾಖಲೆಗಳೊಂದಿಗೆ ಆರೋಪಿಸಿದ್ದರು. ಅಷ್ಟೇ ಅಲ್ಲದೆ ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ ಕುರಿತು ಪ್ರತಿಭಟನೆ ನಡೆಯುತ್ತಿದೆ. ಹಾಗೆಯೇ ಎರಡು ಮತದಾರರ ಗುರುತಿನ ಚೀಟಿ ಹೊಂದಿದ್ದಕ್ಕಾಗಿ ಚುನಾವಣಾ ಆಯೋಗ ತೇಜಸ್ವಿ ಯಾದವ್ಗೆ ನೋಟಿಸ್ ನೀಡಿತ್ತು. ತೇಜಸ್ವಿ ಯಾದವ್ಗೆ ನೀಡಲಾದ ಎರಡನೆ ಗುರುತುಚೀಟಿಯು ನಕಲಿ ಎಂದು ದೃಢಪಡಿಸಲು ತನಿಖೆ ನಡೆಸುವಂತೆ ಚುನಾವಣಾ ಆಯೋಗವು ಆದೇಶಿಸಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

