ಬಿಹಾರ ಮುಖಂಡರು ಡಿಕೆಶಿ ಸಿಎಂ ಆಗಲಿ ಎಂದ ಬಗ್ಗೆ ಸಿದ್ದರಾಮಯ್ಯ ಏನಂದರು ನೋಡಿ!

Edited By:

Updated on: Nov 03, 2025 | 12:10 PM

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕೆಂಬ ಬಗ್ಗೆ ಬಿಹಾರದ ಮುಖಂಡರ ಚರ್ಚೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಳ್ಳಿಹಾಕಿದ್ದಾರೆ. ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಸ್ಪಷ್ಟಪಡಿಸಿದ್ದಾರೆ. ಬಿಹಾರ ಚುನಾವಣೆಯಲ್ಲಿ ಇಂಡಿಯಾ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದು, ಭ್ರಷ್ಟಾಚಾರ, ದುರಾಡಳಿತ ಮತ್ತು ಆಡಳಿತ ವಿರೋಧಿ ಅಲೆಯು ಬಿಜೆಪಿ ವಿರುದ್ಧ ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ.

ಮೈಸೂರು, ನವೆಂಬರ್ 3: ಡಿಸಿಎಂ ಡಿಕೆ ಶಿವಕುಮಾರ್ ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಬೇಕು ಎಂದು ಬಿಹಾರದ ನಾಯಕರು ಬೆಂಗಳೂರಿನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಪ್ರತಿಕ್ರಿಯಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳು ಪ್ರಶ್ನೆ ಕೇಳುತ್ತಿದ್ದಂತೆಯೇ ಸಿಟ್ಟಾದ ಅವರು, ಜನ ಅಥವಾ ಮಾಧ್ಯಮಗಳು ಈ ಬಗ್ಗೆ ಚರ್ಚಿಸುವುದು ಅನಗತ್ಯ. ಹೈಕಮಾಂಡ್ ಆದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅಥವಾ ಮಲ್ಲಿಕಾರ್ಜುನ ಖರ್ಗೆ ಈ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ. ಹೀಗಾಗಿ ಹೈಕಮಾಂಡ್ ನಿರ್ಧಾರವೇ ಅಂತಿಮ. ಬೇರೆಯವರು ಮಾತಾಡಿದರೆ ಅದಕ್ಕೆ ಕಿಮ್ಮತ್ತಿಲ್ಲ ಎಂದು ಹೇಳಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆ ಕುರಿತು ಮಾತನಾಡಿ, ಇಂಡಿಯಾ ಒಕ್ಕೂಟ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಹಾರದಲ್ಲಿ ಬಡತನ ಹೆಚ್ಚಿದ್ದು, ಬಡವರು, ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ದಲಿತರು ಕಾಂಗ್ರೆಸ್ ಪರ ಮತ ಹಾಕಲಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ