ಸುಲ್ತಾನಗಂಜ್ ಪುರಸಭೆಯಲ್ಲಿ ಗುಂಡಿನ ದಾಳಿ; ಇಒ ಸಾವು, ಅಧ್ಯಕ್ಷರ ಸ್ಥಿತಿ ಗಂಭೀರ
ಭಾಗಲ್ಪುರದ ಸುಲ್ತಾನಗಂಜ್ ಪುರಸಭೆ ಕಚೇರಿಯಲ್ಲಿ ಹಾಡಹಗಲೇ ನಡೆದ ಗುಂಡಿನ ದಾಳಿಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಸಾವನ್ನಪ್ಪಿದ್ದಾರೆ. ಪುರಸಭೆಯ ಅಧ್ಯಕ್ಷರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಆತಂಕವನ್ನು ಮೂಡಿಸಿದ್ದು, ತನಿಖೆಯನ್ನು ತೀವ್ರಗೊಳಿಸಲು ಪೊಲೀಸರು ಹಲವು ತಂಡಗಳನ್ನು ರಚಿಸಿದ್ದಾರೆ. ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಸಿಇಒ ಮತ್ತು ಅಧ್ಯಕ್ಷರ ಮೇಲೆ ಗುಂಡು ಹಾರಿಸಲಾಯಿತು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ಪ್ರಕರಣದ ತನಿಖೆಗಾಗಿ ಹಲವಾರು ತಂಡಗಳನ್ನು ರಚಿಸಲಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.
ಭಾಗಲ್ಪುರ, ಏಪ್ರಿಲ್ 28: ಬಿಹಾರದ ಭಾಗಲ್ಪುರ ಜಿಲ್ಲೆಯಲ್ಲಿರುವ ಸುಲ್ತಾನಗಂಜ್ ಪುರಸಭೆ ಕಚೇರಿಯಲ್ಲಿ ಇಂದು ಹಗಲು ಹೊತ್ತಿನಲ್ಲಿಯೇ ಮನಬಂದಂತೆ ಗುಂಡು ಹಾರಿಸಿದ ಘಟನೆ ನಡೆದಿದೆ. ಈ ದಾಳಿಯಲ್ಲಿ ಪುರಸಭೆ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಭೂಷಣ್ ಕುಮಾರ್ ಸಾವನ್ನಪ್ಪಿದ್ದು, ಅಧ್ಯಕ್ಷ ರಾಜ್‌ಕುಮಾರ್ ಗುಡ್ಡು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಇಡೀ ಪ್ರದೇಶದಲ್ಲಿ ಆತಂಕ ಉಂಟುಮಾಡಿತು. ಬುಲೆಟ್ ಬೈಕ್ಗಳಲ್ಲಿ ಬಂದ ಐವರು ದಾಳಿಕೋರರು ಯಾವುದೇ ಮುನ್ಸೂಚನೆ ನೀಡದೆ ಗುಂಡು (firing) ಹಾರಿಸಿದರು. ಸಿಇಒ ಮತ್ತು ಅಧ್ಯಕ್ಷರ ಮೇಲೆ ಗುಂಡು ಹಾರಿಸಲಾಯಿತು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ಪ್ರಕರಣದ ತನಿಖೆಗಾಗಿ ಹಲವಾರು ತಂಡಗಳನ್ನು ರಚಿಸಲಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Apr 28, 2026 09:03 PM
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್ ಶಾಸಕನ ವಿರುದ್ಧವೂ ಎಸ್ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ

