Video: ಕೋಚಿಂಗ್ ಕೇಂದ್ರದ ಎದುರು ವಿದ್ಯಾರ್ಥಿಯ ಮೇಲೆ ಗುಂಡು ಹಾರಿಸಿದ ದುಷ್ಕರ್ಮಿ
ಬಿಹಾರದ ಪಾಟ್ನಾದ ಪೊಲೀಸ್ ಠಾಣೆಯ ಬಳಿ ಹಾಡಹಗಲೇ ವಿದ್ಯಾರ್ಥಿಯೊಬ್ಬನ ಮೇಲೆ ದುಷ್ಕರ್ಮಿಯೊಬ್ಬ ಗುಂಡು ಹಾರಿಸಿರುವ ಘಟನೆ ನಡೆದಿದೆ. ಮಾನೇರ್ ಪೊಲೀಸ್ ಠಾಣೆಯ ಮುಂದೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಯೊಬ್ಬ ವಿದ್ಯಾರ್ಥಿಯ ಮೇಲೆ ಗುಂಡು ಹಾರಿಸಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಬಿಹಾರದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ಈ ಘಟನೆಯು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಪಾಟ್ನಾ, ಸೆಪ್ಟೆಂಬರ್ 05: ಬಿಹಾರದ ಪಾಟ್ನಾದ ಪೊಲೀಸ್ ಠಾಣೆಯ ಬಳಿ ಹಾಡಹಗಲೇ ವಿದ್ಯಾರ್ಥಿಯೊಬ್ಬನ ಮೇಲೆ ದುಷ್ಕರ್ಮಿಯೊಬ್ಬ ಗುಂಡು ಹಾರಿಸಿರುವ ಘಟನೆ ನಡೆದಿದೆ. ಮಾನೇರ್ ಪೊಲೀಸ್ ಠಾಣೆಯ ಮುಂದೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಯೊಬ್ಬ ವಿದ್ಯಾರ್ಥಿಯ ಮೇಲೆ ಗುಂಡು ಹಾರಿಸಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಬಿಹಾರದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ಈ ಘಟನೆಯು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ವಿದ್ಯಾರ್ಥಿಯನ್ನು ಹುಲಸಿ ಟೋಲಾದ ರಾಮಾಪುರ್ ಟೋಫಿರ್ ನಿವಾಸಿ ರಾಹುಲ್ ಕುಮಾರ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ವಿದ್ಯಾರ್ಥಿಯ ಎದೆಗೆ ಗುಂಡು ತಗುಲಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ