AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನಕ್ಕೆ ಕಾಲಿಟ್ಟ ‘ರಾಪಿಡೋ’; ಆಟೋ ಚಾಲಕರ ಆಕ್ರೋಶ, ಬೈಕ್ ಸವಾರನ ಕಣ್ಣೀರು!

ಹಾಸನಕ್ಕೆ ಕಾಲಿಟ್ಟ ‘ರಾಪಿಡೋ’; ಆಟೋ ಚಾಲಕರ ಆಕ್ರೋಶ, ಬೈಕ್ ಸವಾರನ ಕಣ್ಣೀರು!

ಮಂಜುನಾಥ ಕೆಬಿ
| Edited By: |

Updated on: Nov 25, 2026 | 9:56 AM

Share

ಬೆಂಗಳೂರಿನಲ್ಲಿ ಜನಪ್ರಿಯವಾಗಿದ್ದ ಬೈಕ್ ಟ್ಯಾಕ್ಸಿ ಸೇವೆ ಇದೀಗ ಹಾಸನದಂತಹ ಜಿಲ್ಲಾ ಕೇಂದ್ರಗಳಿಗೂ ಕಾಲಿಟ್ಟಿದೆ. ಅನಧಿಕೃತ ವೈಟ್ ಬೋರ್ಡ್ ವಾಹನಗಳ ಬಳಕೆಗೆ ಆಟೋ ಚಾಲಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಇದರಿಂದ ಬದುಕು ಕಟ್ಟಿಕೊಳ್ಳಲು ಹೆಣಗಾಡುತ್ತಿರುವ ಬೈಕ್ ಟ್ಯಾಕ್ಸಿ ಚಾಲಕರ ಸಂಕಷ್ಟವೂ ಬೆಳಕಿಗೆ ಬಂದಿದೆ.

ಬೆಂಗಳೂರು, ನವೆಂಬರ್ 25: ನಗರದಲ್ಲಿ ಜನಪ್ರಿಯವಾಗಿದ್ದ ಬೈಕ್ ಟ್ಯಾಕ್ಸಿ ಸೇವೆ ಇದೀಗ ಕರ್ನಾಟಕದ ಜಿಲ್ಲಾ ಕೇಂದ್ರಗಳಿಗೂ ಲಗ್ಗೆಯಿಟ್ಟಿದೆ. ರಾಪಿಡೋ ಸೇವೆ ಹಾಸನ ಜಿಲ್ಲೆಯಲ್ಲಿ ಆರಂಭವಾಗುತ್ತಿದ್ದಂತೆ, ಆಟೋ ಚಾಲಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಅನಧಿಕೃತವಾಗಿ ವೈಟ್ ಬೋರ್ಡ್ ಬೈಕ್‌ಗಳನ್ನು ಟ್ಯಾಕ್ಸಿಯಾಗಿ ಬಳಸಲಾಗುತ್ತಿದೆ ಎಂದು ಆಟೋ ಚಾಲಕರು ಆಕ್ರೋಶ ಹೊರಹಾಕಿದ್ದಾರೆ.

ಹಾಸನದಲ್ಲಿ, ನೂರಾರು ಆಟೋ ಚಾಲಕರು ಎನ್.ಆರ್. ವೃತ್ತದಲ್ಲಿ ರಾಪಿಡೋ ಬೈಕ್ ಚಾಲಕರನ್ನು ತಡೆದು ಪ್ರತಿಭಟನೆ ನಡೆಸಿದರು. ಬೈಕ್ ಟ್ಯಾಕ್ಸಿ ಸೇವೆಗೆ ಯಾವುದೇ ನೀತಿ ನಿಯಮಗಳಿಲ್ಲ. ಯಾರು ಅವಕಾಶ ನೀಡಿದರು ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಬೈಕ್ ಟ್ಯಾಕ್ಸಿ ಚಾಲಕರೊಬ್ಬರು, “ಹೊಟ್ಟೆಪಾಡಿಗಾಗಿ ಬಂದಿದ್ದೇನೆ, ತಪ್ಪಾಗಿದೆ ಎಂಬ ಅರಿವಿದೆ” ಎಂದು ಕಣ್ಣೀರಿಟ್ಟರು. ಇಂತಹ ಸೇವೆಗಳ ಅನಿಶ್ಚಿತತೆ ಮತ್ತು ಆಟೋ ಚಾಲಕರ ಸಂಕಷ್ಟದಿಂದಾಗಿ, ಈ ವಿಷಯದಲ್ಲಿ ಸರ್ಕಾರ ಒಂದು ನಿರ್ಧಾರ ತೆಗೆದುಕೊಳ್ಳಬೇಕಿದೆ. ಬದುಕಿನ ಬಂಡಿ ಎಳೆಯಲು ಹೆಣಗಾಡುತ್ತಿರುವ ಎರಡೂ ವರ್ಗಗಳ ನಡುವೆ ಸಂಘರ್ಷ ತಲೆದೋರಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Follow Us
ಮಂಜುನಾಥ ಕೆಬಿ
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More