AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ: ಸಹ ಕೈದಿಗಳ ಮೇಲೆ ಹಲ್ಲೆ

ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ: ಸಹ ಕೈದಿಗಳ ಮೇಲೆ ಹಲ್ಲೆ

ರಾಮು, ಆನೇಕಲ್​
| Edited By: |

Updated on: Feb 23, 2026 | 1:46 PM

Share

ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿ ಪ್ರದೀಪ್, ಪರಪ್ಪನ ಅಗ್ರಹಾರ ಜೈಲಿನಲ್ಲಿ ಸುರೇಶ್ ಮತ್ತು ಆದಿತ್ ಮಧುಕಿರಣ್ ಮೇಲೆ ಹಲ್ಲೆ ಮಾಡಿದ್ದಾನೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಫೆಬ್ರವರಿ 18ರಂದು ಈ ಘಟನೆ ನಡೆದಿದ್ದು, ಮೂಗು ಮತ್ತು ಕಪಾಳಕ್ಕೆ ಪ್ರದೀಪ್ ಹೊಡೆದಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಜೈಲು ಸಿಬ್ಬಂದಿ ಎನ್‌ಸಿಆರ್ ದಾಖಲಿಸಿದ್ದಾರೆ.

ಬೆಂಗಳೂರು, ಫೆಬ್ರವರಿ 23: ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿ ಪ್ರದೀಪ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ತನ್ನ ಸಹ ಕೈದಿಗಳ ಮೇಲೆ ಹಲ್ಲೆ ನಡೆಸಿದ್ದಾನೆ.  ಕೊಲೆ ಆರೋಪದಡಿ ಬಂಧಿತನಾಗಿ ಜೈಲೂಟ ಸವಿಯುತ್ತಿದ್ದರೂ ಈತ ಮತ್ತೆ ತನ್ನ ರೌಡಿಸಂ ಪ್ರದರ್ಶಿಸಿದ್ದಾನೆ ಎನ್ನಲಾಗಿದೆ. ಫೆಬ್ರವರಿ 18ರಂದು ಸುರೇಶ್ ಹಾಗೂ ಆದಿತ್ ಮಧುಕಿರಣ್ ಎಂಬುವವರ ಮೇಲೆ ಪ್ರದೀಪ್ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದ್ದು, ಸುರೇಶ್ ಮತ್ತು ಆದಿತ್ ಮಧುಕಿರಣ್ ಅವರ ಮೂಗು ಮತ್ತು ಕಪಾಳಕ್ಕೆ ಪ್ರದೀಪ್​​ ಹೊಡೆದಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನ ಸಿಬ್ಬಂದಿ ನಾನ್-ಕಾಗ್ನಿಜೆಬಲ್ ರಿಪೋರ್ಟ್ (ಎನ್‌ಸಿಆರ್) ಅನ್ನು ದಾಖಲಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.