ಬಿಕ್ಲು ಶಿವ ಕೊಲೆ ಪ್ರಕರಣ; ಶಾಸಕನನ್ನು ಬಂಧಿಸಿಲ್ಲ, ತನಿಖೆ ನಡೆಯುತ್ತಿದೆ: ಸೀಮಂತ್ ಕುಮಾರ್ ಸಿಂಗ್, ಪೊಲೀಸ್ ಆಯುಕ್ತ
ಶಿವಪ್ರಕಾಶ್ ಕೊಲೆ ಪ್ರಕರಣದ ತನಿಖೆ ನಡೆಯುತ್ತಿರುವುದರಿಂದ ಹತ್ಯೆಯ ಹಿಂದಿನ ಉದ್ದೇಶವೇನು ಅನ್ನೋದನ್ನು ಈಗಲೇ ಹೇಳಲಾಗಲ್ಲ, ತನಿಖೆ ಸಂಪೂರ್ಣಗೊಂಡ ಬಳಿಕ ಮಾಧ್ಯಮಗಳಿಗೆ ಹೇಳುತ್ತೇವೆ ಎಂದು ಸೀಮಂತ್ ಕುಮಾರ್ ಹೇಳಿದರು. ಮಂಗಳವಾರ ರಾತ್ರಿ ನಡೆದ ಕೊಲೆ ಪ್ರಕರಣದಲ್ಲಿ ಶಾಸಕ ಬಸವರಾಜ ಅಲ್ಲದೆ ಇನ್ನೂ ನಾಲ್ವರ ವಿರುದ್ಧ ಎಫ್ಐಅರ್ ದಾಖಲಾಗಿದೆ.
ಬೆಂಗಳೂರು, ಜುಲೈ 17: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಕೆಅರ್ ಪುರಂ ಬಿಜೆಪಿ ಶಾಸಕ ಭೈರತಿ ಬಸವರಾಜ (Byrathi Basavaraj) ಹೆಸರು ಕೇಳಿಬಂದಿರುವುದರಿಂದ ಅದು ಗಂಭೀರ ಸ್ವರೂಪ ಪಡೆದುಕೊಂಡಿದೆ ಮತ್ತು ಎಸಿಪಿ ಹಂತದ ಅಧಿಕಾರಿಯಿಂದ ತನಿಖೆ ಮಾಡಿಸಲಾಗುತ್ತಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ ಕುಮಾರ್ ಸಿಂಗ್ ಹೇಳಿದರು. ಮಾಧ್ಯಮಗಳೊಂದಿಗೆ ಮಾತಾಡಿದ ಅವರು ಎಫ್ಐಆರ್ನಲ್ಲಿ ದಾಖಲಾಗಿರುವ ಅಂಶಗಳ ಆಧಾರದ ಮೇಲೆ ತನಿಖೆ ನಡೆಯುತ್ತಿದೆ, ನಗರದ ಇತರ ಪೊಲೀಸ್ ಠಾಣೆಗಳಲ್ಲಿ ಆರೋಪಿಗಳ ಅಪರಾಧ ಪ್ರಕರಣಗಳು ದಾಖಲಾಗಿವೆಯಾ ಎಂಬ ಅಂಶಗಳನ್ನೂ ಪರಿಗಣಿಸಲಾಗುತ್ತಿದೆ ಎಂದು ಕಮೀಷನರ್ ಹೇಳಿದರು.
ಇದನ್ನೂ ಓದಿ: ಬೆಂಗಳೂರಿನಲ್ಲಿ ರೌಡಿಶೀಟರ್ ಕೊಲೆ: ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ಐಆರ್
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ