ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದ ಬಸ್ ನಿಲ್ದಾಣದ ಬಳಿ ಸಂಭವಿಸಿದ ಅಗ್ನಿ ಅವಘಡದಲ್ಲಿ 8ಕ್ಕೂ ಹೆಚ್ಚು ಅಂಗಡಿಗಳು ಭಸ್ಮವಾಗಿವೆ. ಮೂರಕ್ಕೂ ಹೆಚ್ಚು ಸಿಲಿಂಡರ್‌ಗಳು ಸ್ಫೋಟಗೊಂಡಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದು, ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ. ಶಾರ್ಟ್ ಸರ್ಕ್ಯೂಟ್ ಆಗಿರಬಹುದು ಅಥವಾ ಕಿಡಿಗೇಡಿಗಳ ಕೃತ್ಯವಾಗಿದ್ದಿರಬಹುದೆಂದು ಶಂಕೆ ವ್ಯಕ್ತವಾಗಿದೆ.
ಚಾಮರಾಜನಗರ, ಜನವರಿ 09: ಬಿಳಿಗಿರಿರಂಗನ ಬೆಟ್ಟದ ಬಸ್ ನಿಲ್ದಾಣದ ಬಳಿ ಸಂಭವಿಸಿದ ಅಗ್ನಿ ಅವಘಡದಲ್ಲಿ 8ಕ್ಕೂ ಹೆಚ್ಚು ಅಂಗಡಿಗಳು ಭಸ್ಮವಾಗಿವೆ. ಮೂರಕ್ಕೂ ಹೆಚ್ಚು ಸಿಲಿಂಡರ್‌ಗಳು ಸ್ಫೋಟಗೊಂಡಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದು, ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ. ಶಾರ್ಟ್ ಸರ್ಕ್ಯೂಟ್ ಆಗಿರಬಹುದು ಅಥವಾ ಕಿಡಿಗೇಡಿಗಳ ಕೃತ್ಯವಾಗಿದ್ದಿರಬಹುದೆಂದು ಶಂಕೆ ವ್ಯಕ್ತವಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

