25 ಸಾವಿರ ಕೋಟಿ ಬಿಲ್​ ಬಾಕಿ; ರಾಜ್ಯ ಸರ್ಕಾರದ ವಿರುದ್ಧ ಬೀದಿಗಿಳಿದ ಉತ್ತರ ಕರ್ನಾಟಕದ ಗುತ್ತಿಗೆದಾರರು

ಬಾಕಿ ಪಾವತಿಗೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ಉತ್ತರ ಕರ್ನಾಟಕ ಗುತ್ತಿಗೆದಾರರು ಬೀದಿಗಿಳಿದಿದ್ದು, ‘ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ, ‘25 ಸಾವಿರ ಕೋಟಿ ಬಾಕಿ ಬಿಲ್ ಕೊಡಬೇಕಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ ಸರ್ಕಾರಕ್ಕೆ 15 ದಿನಗಳ ಗಡುವು ಕೊಡುತ್ತೇವೆ. ಆಗಲೂ ಬಿಲ್​ ಪಾವತಿಯಾಗದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದರು.

25 ಸಾವಿರ ಕೋಟಿ ಬಿಲ್​ ಬಾಕಿ; ರಾಜ್ಯ ಸರ್ಕಾರದ ವಿರುದ್ಧ ಬೀದಿಗಿಳಿದ ಉತ್ತರ ಕರ್ನಾಟಕದ ಗುತ್ತಿಗೆದಾರರು
|

Updated on: Jul 31, 2024 | 3:39 PM

ಧಾರವಾಡ, ಜು.31: ಬಾಕಿ ಪಾವತಿಗೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ಉತ್ತರ ಕರ್ನಾಟಕ ಗುತ್ತಿಗೆದಾರರು ಬೀದಿಗಿಳಿದಿದ್ದು, ಇಂದು (ಬುಧವಾರ) ಉತ್ತರ ಕರ್ನಾಟಕ ಗುತ್ತಿಗೆದಾರರ ಸಂಘದ ನೇತೃತ್ವದಲ್ಲಿ ಧಾರವಾಡದಲ್ಲಿ ಬೃಹತ್​ ಪ್ರತಿಭಟನೆ ನಡೆಸಲಾಯಿತು. ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ, ‘25 ಸಾವಿರ ಕೋಟಿ ಬಾಕಿ ಬಿಲ್ ಕೊಡಬೇಕಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ ಜಿ.ಎಸ್.ಟಿ. ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ರವಾನಿಸಿದರು.

ಈ ಕುರಿತು ಪ್ರತಿಭಟನೆಯಲ್ಲಿ ಉತ್ತರ ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಸುಭಾಷ್​ ಪಾಟೀಲ್​ ಮಾತನಾಡಿ, ‘ಬಹಳ ದಿನಗಳಿಂದ ಉತ್ತರ ಕರ್ನಾಟಕದ ಗುತ್ತಿಗೆದಾರರ ಬಿಲ್ ಪಾವತಿ ಆಗಿಲ್ಲ. ಫೆಬ್ರುವರಿ-ಮಾರ್ಚ್​ನಲ್ಲಿ ಪ್ರತಿಭಟನೆ ಆಗಬೇಕಿತ್ತು.
ಆದರೆ, ಬಿಲ್ ಕೊಡುತ್ತೇನೆ ಎಂದು ಹೇಳಿದ್ದರಿಂದ ಮುಂದಕ್ಕೆ ಹಾಕಿದ್ದೆವು. ಆದರೆ ಇನ್ನೂ ಬಾಕಿ ಬಿಲ್ ಪಾವತಿಯಾಗಿಲ್ಲ.
ಈಗ ಮಾಡುತ್ತಿರೋದು ಸಾಂಕೇತಿಕ ಪ್ರತಿಭಟನೆ, ಸರ್ಕಾರಕ್ಕೆ 15 ದಿನಗಳ ಗಡುವು ಕೊಡುತ್ತೇವೆ. ಆಗಲೂ ಬಿಲ್​ ಪಾವತಿಯಾಗದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us