ಗಣ್ಯರು, ಸೆಲೆಬ್ರಿಟಿಗಳಿಲ್ಲದೆ ಸರಳವಾಗಿ ಮದುವೆಯಾದ ಬಿಲಿಯನೇರ್ ಮಗ ಜೀತ್ ಅದಾನಿ
ಭಾರತದ ಶ್ರೀಮಂತ ಉದ್ಯಮಿ ಗೌತಮ್ ಅದಾನಿ ತಮ್ಮ ಮಗನ ಮದುವೆಯ ಮೊದಲ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅದಾನಿ ಗ್ರೂಪ್‌ನ ಸ್ಥಾಪಕ ಮತ್ತು ಅಧ್ಯಕ್ಷರಾದ ಗೌತಮ್ ಅದಾನಿ ಅವರು ಇತ್ತೀಚೆಗೆ ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾ ಕುಂಭಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ತಮ್ಮ ಮಗನ ವಿವಾಹದ ಬಗ್ಗೆ ಮಾತನಾಡಿದ್ದರು. ಜೀತ್ ಅದಾನಿ ಮತ್ತು ದಿವಾ ಶಾ ಅವರ ವಿವಾಹ ಸಂಭ್ರಮ ಗುಜರಾತ್‌ನ ಅಹಮದಾಬಾದ್‌ನಲ್ಲಿ ಅದಾನಿ ಪಟ್ಟಣವಾದ ಶಾಂತಿಗ್ರಾಮದಲ್ಲಿ ನಡೆಯಿತು. ಸಾಂಪ್ರದಾಯಿಕ ಗುಜರಾತಿ ಮತ್ತು ಜೈನ ಸಂಪ್ರದಾಯಗಳ ಪ್ರಕಾರ ವಿವಾಹ ನಡೆಯಿತು.
ಅಹಮದಾಬಾದ್: ಭಾರತದ ಬಿಲಿಯನೇರ್ ಆಗಿರುವ ಗೌತಮ್ ಅದಾನಿ ಮತ್ತು ಅವರ ಪತ್ನಿ ಪ್ರೀತಿ ಅದಾನಿಯ ಕಿರಿಯ ಮಗ ಜೀತ್ ಅದಾನಿ ಇಂದು ವಜ್ರದ ಉದ್ಯಮಿ ದಿವಾ ಶಾ ಅವರನ್ನು ವಿವಾಹವಾಗಿದ್ದಾರೆ. ಅವರ ವಿವಾಹವು ಅತ್ಯಂತ ಸರಳ ಮತ್ತು ಸಾಂಪ್ರದಾಯಿಕ ಪದ್ಧತಿಗಳೊಂದಿಗೆ ನಡೆದಿದೆ. ಮಗನ ಮದುವೆಗೆ ಯಾವುದೇ ಗಣ್ಯರು ಮತ್ತು ಸೆಲೆಬ್ರಿಟಿಗಳನ್ನು ಆಹ್ವಾನಿಸದೆ ಕೇವಲ ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆ ಮಾಡಿದ್ದಾರೆ ಗೌತಮ್ ಅದಾನಿ. ಇದಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಅಲ್ಲದೆ, ತಮ್ಮ ಮಗನ ಮದುವೆಯ ಹಿನ್ನೆಲೆಯಲ್ಲಿ ಗೌತಮ್ ಅದಾನಿ ಅವರು 10,000 ಕೋಟಿ ರೂ.ಗಳನ್ನು ವಿವಿಧ ಸಾಮಾಜಿಕ ಉದ್ದೇಶಗಳಿಗೆ ವಿನಿಯೋಗಿಸಲು ದೇಣಿಗೆ ನೀಡುವ ಮೂಲಕ ಮಾದರಿಯಾಗಿದ್ದಾರೆ. ಜೀತ್ ಅದಾನಿ ಮತ್ತು ದಿವಾ ಶಾ ಅವರ ಮದುವೆಯ ವಿಡಿಯೋ ಇಲ್ಲಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos