ಉಡುಪಿಯ ವಂಡ್ಸೆ ಸ್ವಚ್ಛತೆಗೆ ಮಾದರಿ ಗ್ರಾಮ: ಬಯೋಕಾನ್ ಮುಖ್ಯಸ್ಥೆ ಪ್ರಶಂಸೆ
ಬಯೋಕಾನ್‌ನ ಮುಖ್ಯಸ್ಥೆ ಕಿರಣ್ ಮಜುಂದರ್ ಶಾ ಅವರು ಕುಂದಾಪುರ ತಾಲೂಕಿನ ವಂಡ್ಸೆ ಗ್ರಾಮ ಪಂಚಾಯತಿಯ ಅದ್ಭುತ ಸ್ವಚ್ಛತಾ ಕಾರ್ಯಕ್ರಮವನ್ನು ಮೆಚ್ಚಿಕೊಂಡಿದ್ದಾರೆ. ಅವರು ಟ್ವಿಟರ್‌ನಲ್ಲಿ ವೀಡಿಯೋ ಹಂಚಿಕೊಂಡು, ಸರ್ಕಾರದ ಹಿರಿಯ ಅಧಿಕಾರಿಗಳಿಗೆ ಗ್ರಾಮದ ಮಾದರಿಯನ್ನು ಅನುಸರಿಸಲು ಮನವಿ ಮಾಡಿದ್ದಾರೆ.
ಉಡುಪಿ, ನವೆಂಬರ್ 30: ಕುಂದಾಪುರ ತಾಲೂಕಿನ ವಂಡ್ಸೆ ಗ್ರಾಮ ಪಂಚಾಯತಿಯ ಸ್ವಚ್ಛ ಗ್ರಾಮದ ಕಾರ್ಯವೈಖರಿಗೆ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದರ್ ಶಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಟ್ವಿಟ್ಟರ್‌ನಲ್ಲಿ ವೀಡಿಯೋ ಪೋಸ್ಟ್ ಮಾಡಿ ಸರ್ಕಾರದ ಮುಖ್ಯ ಕಾರ್ಯದರ್ಶಿ, ಡಿಸಿಎಂ ಡಿಕೆ ಶಿವಕುಮಾರ್, ಬಿಬಿಎಂಪಿ ಆಯುಕ್ತರಿಗೆ ವೀಡಿಯೋ ಟ್ಯಾಗ್ ಮಾಡಿದ್ದಾರೆ. ಮಹಾನಗರದ ವಾರ್ಡ್‌ಗಳಿಗೆ ಗ್ರಾಮ ಮಾದರಿಯಾಗಿದೆ. ಸರಕಾರ ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುವಂತೆ ಮನವಿ ಮಾಡಿದ್ದಾರೆ. ವಂಡ್ಸೆ ಗ್ರಾಮ ತ್ಯಾಜ್ಯ ಮುಕ್ತ ಗ್ರಾಮ ಎಂಬ ಹೆಗ್ಗಳಿಕೆ ಪಡೆದಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Nov 30, 2024 02:10 PM
Latest Videos