ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ: ಸುರಕ್ಷಿತವಾಗಿ ಲ್ಯಾಂಡ್, ತಪ್ಪಿದ ಅನಾಹುತ
ವಿಶಾಖಪಟ್ಟಣಂನಿಂದ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ IX2065 ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ. 148 ಪ್ರಯಾಣಿಕರಿದ್ದ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡರೂ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಬಳಿಕ ವಿಮಾನವನ್ನು V49 ಸ್ಟ್ಯಾಂಡ್‌ನಲ್ಲಿ ನಿಲ್ಲಿಸಲಾಗಿದೆ. ಸದ್ಯ, ದೊಡ್ಡ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿದೆ.
ಬೆಂಗಳೂರು, ಅಕ್ಟೋಬರ್ 20: ವಿಶಾಖಪಟ್ಟಣಂನಿಂದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ. ಇದರಿಂದ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದ್ದು, 148 ಪ್ರಯಾಣಿಕರನ್ನು ಹೊತ್ತು ಬರುತ್ತಿದ್ದ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದ IX2065 ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದರೂ, ಯಾವುದೇ ಅನಾಹುತ ಸಂಭವಿಸದಂತೆ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ತಾಂತ್ರಿಕ ಸಮಸ್ಯೆಯ ಹಿನ್ನೆಲೆಯಲ್ಲಿ ವಿಮಾನವನ್ನು ಸದ್ಯ ವಿಮಾನ ನಿಲ್ದಾಣದ V49 ಸ್ಟ್ಯಾಂಡ್‌ನಲ್ಲಿ ನಿಲ್ಲಿಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

