Rama Navami: ನಾಡಿನೆಲ್ಲೆಡೆ ರಾಮನವಮಿ ಸಂಭ್ರಮ, ನಗರದ ರಾಮಮಂದಿರಗಳಲ್ಲಿ ವಿಶೇಷ ಪೂಜೆ; ಪಾನಕ, ಮಜ್ಜಿಗೆ, ಕೋಸಂಬರಿ ವಿತರಣೆ

Rama Navami: ನಾಡಿನೆಲ್ಲೆಡೆ ರಾಮನವಮಿ ಸಂಭ್ರಮ, ನಗರದ ರಾಮಮಂದಿರಗಳಲ್ಲಿ ವಿಶೇಷ ಪೂಜೆ; ಪಾನಕ, ಮಜ್ಜಿಗೆ, ಕೋಸಂಬರಿ ವಿತರಣೆ

ಅರುಣ್​ ಕುಮಾರ್​ ಬೆಳ್ಳಿ
|

Updated on:Mar 30, 2023 | 11:21 AM

ಯಶವಂತಪುರದ ಇಸ್ಕಾನ್ ದೇವಸ್ಥಾನದಲ್ಲಿ ರಾಮನವಮಿ ಪ್ರಯುಕ್ತ ವಿಶೇಷ ಪೂಜೆ ಏರ್ಪಡಿಸಿ ಭಕ್ತಾದಿಗಳಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರು: ದೇಶದಾದ್ಯಂತ ರಾಮನವಮಿಯನ್ನು (Ram Navami) ಶ್ರದ್ಧೆ, ಸಂಭ್ರಮ ಮತ್ತು ಸಡಗರಗಳಿಂದ ಆಚರಿಸಲಾಗುತ್ತಿದೆ. ನಗರದ ಎಲ್ಲ ರಾಮಮಂದಿರ (Ram Mandir), ಆಂಜನೇಯ ಮತ್ತು ಶ್ರೀಕೃಷ್ಟ ದೇವಸ್ಥಾನಗಳನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿದೆ ಮತ್ತು ಅರ್ಚಕರು ಹೋಮ, ಹವನ, ಪೂಜಾ ಕೈಂಕರ್ಯಗಳನ್ನು ನೆರವೇರಿಸುತ್ತಿದ್ದಾರೆ. ಯಶವಂತಪುರದ ಇಸ್ಕಾನ್ ದೇವಸ್ಥಾನದಲ್ಲಿ (ISKCON temple) ರಾಮನವಮಿ ಪ್ರಯುಕ್ತ ವಿಶೇಷ ಪೂಜೆ ಏರ್ಪಡಿಸಿ ಭಕ್ತಾದಿಗಳಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ. ರಾಮಮಂದಿರ ಮತ್ತು ಆಂಜನೇಯನ ದೇವಸ್ಥಾನಗಳಲ್ಲಿ ಭಕ್ತರಿಗೆ ಮಜ್ಜಿಗೆ, ಪಾನಕ ಮತ್ತು ಕೋಸಂಬರಿ ವಿತರಣೆ ಮಾಡಲಾಗುತ್ತಿದೆ. ಹಬ್ಬದ ಅಂಗವಾಗಿ ಬೆಂಗಳೂರಿನ ನಾನಾಭಾಗಗಳಲ್ಲಿ ಭಜನೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 30, 2023 11:21 AM