ಧಾರವಾಡದಲ್ಲಿ ಗೌರವ ಧನ ಹೆಚ್ಚಿಸುವಂತೆ ಬಿಸಿಯೂಟ ಕಾರ್ಯಕರ್ತರ ಪ್ರತಿಭಟನೆ
ಹಲವಾರು ದಿನಗಳಿಂದ ಬಿಸಿಯೂಟ ಕಾರ್ಯಕರ್ತರು, ಸಹಾಯಧನ ಹೆಚ್ಚಳಕ್ಕೆ ಆಗ್ರಹಿಸಿ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಅದರಂತೆ ಇಂದು(ಫೆ.03) ಕೂಡ ಕರ್ನಾಟಕ ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ನೂರಕ್ಕೂ ಹೆಚ್ಚು ಕಾರ್ಯಕರ್ತೆಯರು ಸೌಟು ಹಿಡಿದು ಪ್ರತಿಭಟನೆ ನಡೆಸಿದರು. ಮುಂದಿನ ಬಜೆಟ್ನಲ್ಲಿ ಗೌರವ ಧನ ಹೆಚ್ಚಿಸುವಂತೆ ಸರ್ಕಾರಕ್ಕೆ ಆಗ್ರಹಿಸಿದರು.
ಧಾರವಾಡ, ಫೆ.03: ಬಿಸಿಯೂಟ ಕಾರ್ಯಕರ್ತರ ಸಹಾಯಧನ ಹೆಚ್ಚಳಕ್ಕೆ ಆಗ್ರಹಿಸಿ ಇಂದು(ಫೆ.03) ಧಾರವಾಡ (Dharwad) ಜಿಲ್ಲಾಧಿಕಾರಿ ಕಚೇರಿ ಎದುರು ಸೌಟು ಮತ್ತು ಚಮಚ ಹಿಡಿದು ಪ್ರತಿಭಟನೆ ನಡೆಸಲಾಗಿದೆ. ಬಜೆಟ್ನಲ್ಲಿ 6000 ರೂಪಾಯಿ ಗೌರವ ಧನ ಹೆಚ್ಚಿಸುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ನೂರಕ್ಕೂ ಹೆಚ್ಚು ಕಾರ್ಯಕರ್ತೆಯರು ಸೌಟು ಹಿಡಿದು ಪ್ರತಿಭಟನೆ ನಡೆಸಿದರು. ಜೊತೆಗೆ ಅಡುಗೆ ಸಮವಸ್ತ್ರ ಕೊಡದ ಹಿನ್ನೆಲೆ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಪರಸ್ವರ ಸೌಟು ಬಡೆದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Latest Videos