ಯುಗಾದಿ ಹಬ್ಬ ಪ್ರಯುಕ್ತ ಶಿವಮೊಗ್ಗದ ಆರೆಸ್ಸೆಸ್ ಕಾರ್ಯಕ್ರಮದಲ್ಲಿ ರಾಘವೇಂದ್ರ- ಈಶ್ವರಪ್ಪ ಮುಖಾಮುಖಿ
ರಾಘವೇಂದ್ರ ಮುಂಭಾಗದ ಸಾಲಿನಲ್ಲಿ ಕುಳಿತಿದ್ದರೆ ಈಶ್ವರಪ್ಪ ಹಿಂಭಾಗದ ಸಾಲಿನಲ್ಲಿ ಗಂಬೀರ ಮುಖಮುದ್ರೆಯೊಂದಿಗೆ ಆಸೀನರಾಗಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ತಮ್ಮ ಮಗ ಕಾಂತೇಶ್ ಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡದ ಕಾರಣ ಬಿಜೆಪಿ ನಾಯಕತ್ವದ ವಿರುದ್ಧ ಸಿಡಿದೆದ್ದಿರುವ ಈಶ್ವರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.
ಶಿವಮೊಗ್ಗ: ಹಿರಿಯ ಆದರೆ ಸದ್ಯಕ್ಕೆ ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ಬಂಡಾಯವೆದ್ದಿರುವ ಕೆಎಸ್ ಈಶ್ವರಪ್ಪ (KS Eshwarappa) ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮತ್ತು ಹಿರಿಯ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ (BS Yediyurappa) ಅವರ ಪುತ್ರ ಬಿವೈ ರಾಘವೇಂದ್ರ (BY Raghavendra) ಇಬ್ಬರೂ ಆರೆಸ್ಸೆಸ್ ಕಾರ್ಯಕರ್ತರು ಆದರೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಎದುರಾಳಿಗಳು. ಇಂದು ಬೆಳಗ್ಗೆ ಜಿಲ್ಲೆಯ ಆದಿಚುಂಚನಗಿರಿ ಶಾಲಾ ಅವರಣದಲ್ಲಿ ಶಿವಮೊಗ್ಗದ ಅರೆಸ್ಸೆಸ್ ಮುಖಂಡರು ಯುಗಾದಿ ಹಬ್ಬದ ಪ್ರಯುಕ್ತ ಕಾರ್ಯಕ್ರಮವೊಂದನ್ನು ಏರ್ಪಡಿಸಿದ್ದರು. ಈ ಕಾರ್ಯಕ್ರಮದಲ್ಲಿ ರಾಘವೇಂದ್ರ ಮತ್ತು ಈಶ್ವರಪ್ಪ ಇಬ್ಬರೂ ಭಾಗಿಯಾಗಿದ್ದು ವಿಶೇಷ. ರಾಘವೇಂದ್ರ ಮುಂಭಾಗದ ಸಾಲಿನಲ್ಲಿ ಕುಳಿತಿದ್ದರೆ ಈಶ್ವರಪ್ಪ ಹಿಂಭಾಗದ ಸಾಲಿನಲ್ಲಿ ಗಂಬೀರ ಮುಖಮುದ್ರೆಯೊಂದಿಗೆ ಆಸೀನರಾಗಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ತಮ್ಮ ಮಗ ಕಾಂತೇಶ್ ಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡದ ಕಾರಣ ಬಿಜೆಪಿ ನಾಯಕತ್ವದ ವಿರುದ್ಧ ಸಿಡಿದೆದ್ದಿರುವ ಈಶ್ವರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಆರೆಸ್ಸೆಸ್ ಕಾರ್ಯಕ್ರಮದಲ್ಲಿ ಇವರಿಬ್ಬರು ಮುಖಾಮುಖಿಯಾದರೂ ಪರಸ್ಪರ ವಿಶ್ ಮಾಡಿಕೊಳ್ಳಲಿಲ್ಲ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಭೇಟಿಗೆ ನಿರಾಕರಿಸಿದ ಅಮಿತ್ ಶಾ; ನಿರಾಶರಾಗಿ ಬೆಂಗಳೂರಿಗೆ ವಾಪಸ್ಸಾದ ಕೆಎಸ್ ಈಶ್ವರಪ್ಪ