ಬೆಂಗಳೂರಲ್ಲೊಂದು ವಿಚಿತ್ರ ಘಟನೆ: ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಸ್ಕೂಟರ್ರಿನಲ್ಲಿ ಪರಾರಿಯಾಗಲು ಯತ್ನಿಸಿದ ಕಳ್ಳನನ್ನು ಕಾರ್ಮಿಕನೋರ್ವ ಹಿಡಿಯಲು ಯತ್ನಿಸಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿ ಸ್ಕೂಟಿಯಿಂದ ಬಿದ್ದ ಬಳಿಕ ಸ್ಥಳದಿಂದ ಓಡುವಾಗ ಹೃದಯಾಘಾತದಿಂದ ಫುಟ್‌ಪಾತ್ ಮೇಲೆಯೇ ಕುಸಿದು ಬಿದ್ದು ಆತ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮತ್ತೋರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು, ಜೂನ್ 19: ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ ವ್ಯಕ್ತಿ ಕ್ಷಣ ಮಾತ್ರದಲ್ಲಿ ಮೃತಪಟ್ಟಿರುವ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜುನೈದ್ ಎಂಬಾತ ವ್ಯಕ್ತಿಯೋರ್ವರ ಮೊಬೈಲ್ ಕಸಿದು ಸ್ಕೂಟಿಯಲ್ಲಿ ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಎದುರಿನಿಂದ ಬರುತ್ತಿದ್ದ ಕಾರ್ಮಿಕ ಈತನತ್ತ ಮೂಟೆಯನ್ನು ಎಸೆದಿದ್ದು, ನಿಯಂತ್ರಣ ತಪ್ಪಿ ಬಿದ್ದ ಜುನೈದ್ ಅಲ್ಲಿಂದ ತಪ್ಪಿಸಿಕೊಂಡು ಓಡಿದ್ದಾನೆ. ಆದರೆ ಫುಟ್‌ಪಾತ್ ಮೇಲೆ ಕುಳಿತುಕೊಳ್ಳುತ್ತಿದ್ದಂತೆಯೇ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಹೃದಯ ಸಂಬಂಧಿ ಸಮಸ್ಯೆಯಿಂದ ಜುನೈದ್ ಬಳಲುತ್ತಿದ್ದ ಎನ್ನಲಾಗಿದ್ದು, ಮತ್ತೋರ್ವ ಆರೋಪಿ ಅರ್ಬಾಜ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ

