ಬೆಂಗಳೂರಲ್ಲೊಂದು ವಿಚಿತ್ರ ಘಟನೆ: ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!

Edited By:

Updated on: Jun 19, 2026 | 11:52 AM

ಮೊಬೈಲ್ ಕಸಿದು ಸ್ಕೂಟರ್ರಿನಲ್ಲಿ ಪರಾರಿಯಾಗಲು ಯತ್ನಿಸಿದ ಕಳ್ಳನನ್ನು ಕಾರ್ಮಿಕನೋರ್ವ ಹಿಡಿಯಲು ಯತ್ನಿಸಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿ ಸ್ಕೂಟಿಯಿಂದ ಬಿದ್ದ ಬಳಿಕ ಸ್ಥಳದಿಂದ ಓಡುವಾಗ ಹೃದಯಾಘಾತದಿಂದ ಫುಟ್‌ಪಾತ್ ಮೇಲೆಯೇ ಕುಸಿದು ಬಿದ್ದು ಆತ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮತ್ತೋರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು, ಜೂನ್​​ 19: ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ ವ್ಯಕ್ತಿ ಕ್ಷಣ ಮಾತ್ರದಲ್ಲಿ ಮೃತಪಟ್ಟಿರುವ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜುನೈದ್ ಎಂಬಾತ ವ್ಯಕ್ತಿಯೋರ್ವರ ಮೊಬೈಲ್​​ ಕಸಿದು ಸ್ಕೂಟಿಯಲ್ಲಿ ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಎದುರಿನಿಂದ ಬರುತ್ತಿದ್ದ ಕಾರ್ಮಿಕ ಈತನತ್ತ ಮೂಟೆಯನ್ನು ಎಸೆದಿದ್ದು, ನಿಯಂತ್ರಣ ತಪ್ಪಿ ಬಿದ್ದ ಜುನೈದ್​​ ಅಲ್ಲಿಂದ ತಪ್ಪಿಸಿಕೊಂಡು ಓಡಿದ್ದಾನೆ. ಆದರೆ ಫುಟ್​​ಪಾತ್ ಮೇಲೆ ಕುಳಿತುಕೊಳ್ಳುತ್ತಿದ್ದಂತೆಯೇ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಹೃದಯ ಸಂಬಂಧಿ ಸಮಸ್ಯೆಯಿಂದ ಜುನೈದ್ ಬಳಲುತ್ತಿದ್ದ ಎನ್ನಲಾಗಿದ್ದು, ಮತ್ತೋರ್ವ ಆರೋಪಿ ಅರ್ಬಾಜ್​​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More