ರಾಮನಗರ ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ: ಉಸ್ತುವಾರಿ ಸಚಿವ ಅಶ್ವತ್ಥ್ ನಾರಾಯಣ ವಿರುದ್ಧ ಕಾರ್ಯಕರ್ತರ ಪ್ರತಿಭಟನೆ
ರಾಮನಗರ ಜಿಲ್ಲಾ ಬಿಜೆಪಿ ಘಟಕದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ವಿರುದ್ಧ ಕಪ್ಪುಪಟ್ಟಿ ಧರಿಸಿ ಬಿಜೆಪಿ ಕಾರ್ಯಕರ್ತರು ಪಂಚಮುಖಿ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಮೌನ ಪ್ರತಿಭಟನೆ ಮಾಡಿದ್ದಾರೆ.
ರಾಮನಗರ: ರಾಮನಗರ (Ramanagara) ಜಿಲ್ಲಾ ಬಿಜೆಪಿ (BJP) ಘಟಕದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ (Ashwath Narayan) ವಿರುದ್ಧ ಕಪ್ಪುಪಟ್ಟಿ ಧರಿಸಿ ಬಿಜೆಪಿ ಕಾರ್ಯಕರ್ತರು ಪಂಚಮುಖಿ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಮೌನ ಪ್ರತಿಭಟನೆ ಮಾಡಿದ್ದಾರೆ. ರೇಷ್ಮೆ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೌತಮ್ ಗೌಡಗೆ ಹೆಚ್ಚು ಮನ್ನಣೆ ನೀಡುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Latest Videos