ಸಚಿವ ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಭೂಮಿ ಎಲ್ಲಿ? ಹೇಗಿದೆ ನೋಡಿ
ಬೆಂಗಳೂರಿನ ಬ್ಯಾಟರಾಯನಪುರ ಕಾಂಗ್ರೆಸ್ ಶಾಸಕ, ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ಈವರೆಗೂ ಯಾವ ಹಗರಣದಲ್ಲೂ ಸಿಲುಕದ ಕ್ಲೀನ್ ಇಮೇಜ್ ರಾಜಕಾರಣಿ. ಆದ್ರೆ, ಇದೇ ಮೊದಲ ಬಾರಿಗೆ ಭೂಕಬಳಿಕೆ ಆರೋಪ ಇವರನ್ನೀಗ ಸುತ್ತಿಕೊಂಡಿದೆ.ಹೌದು..ಕೋಲಾರ ತಾಲೂಕಿನ ಗರುಡಪಾಳ್ಯ ಸಚಿವ ಕೃಷ್ಣಭೈರೇಗೌಡರ ಹುಟ್ಟೂರು. ನರಸುಪುರ ಹೋಬಳಿಯ ಗರುಡಪಾಳ್ಯದಲ್ಲಿ 200ಎಕರೆಗೂ ಹೆಚ್ಚು ಜಾಗವಿದೆ. ಇಲ್ಲಿನ ಸರ್ವೆ ನಂಬರ್ 46 ಮತ್ತು 47ರಲ್ಲಿ . ಇದೇ ಸರ್ವೇ ನಂಬರ್‌ನಲ್ಲೇ ಸಚಿವರ ಹೆಸರಿನಲ್ಲಿ 21 ಎಕರೆ ಜಮೀನಿದೆ. ಆದ್ರೆ, ಇದು ಸ್ಮಶಾನ ಮತ್ತು ಕೆರೆ ಭೂಮಿಯಾಗಿದ್ದು, ನಕಲಿ ದಾಖಲೆಗಳನ್ನ ಸೃಷ್ಟಿಸಿ ಸಚಿವರು ಅದನ್ನ ಕಬಳಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಕೋಲಾರ, (ಡಿಸೆಂಬರ್ 18): ಬೆಂಗಳೂರಿನ ಬ್ಯಾಟರಾಯನಪುರ ಕಾಂಗ್ರೆಸ್ ಶಾಸಕ, ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ಈವರೆಗೂ ಯಾವ ಹಗರಣದಲ್ಲೂ ಸಿಲುಕದ ಕ್ಲೀನ್ ಇಮೇಜ್ ರಾಜಕಾರಣಿ. ಆದ್ರೆ, ಇದೇ ಮೊದಲ ಬಾರಿಗೆ ಭೂಕಬಳಿಕೆ ಆರೋಪ ಇವರನ್ನೀಗ ಸುತ್ತಿಕೊಂಡಿದೆ.ಹೌದು..ಕೋಲಾರ ತಾಲೂಕಿನ ಗರುಡಪಾಳ್ಯ ಸಚಿವ ಕೃಷ್ಣಭೈರೇಗೌಡರ ಹುಟ್ಟೂರು. ನರಸುಪುರ ಹೋಬಳಿಯ ಗರುಡಪಾಳ್ಯದಲ್ಲಿ 200ಎಕರೆಗೂ ಹೆಚ್ಚು ಜಾಗವಿದೆ. ಇಲ್ಲಿನ ಸರ್ವೆ ನಂಬರ್ 46 ಮತ್ತು 47ರಲ್ಲಿ . ಇದೇ ಸರ್ವೇ ನಂಬರ್‌ನಲ್ಲೇ ಸಚಿವರ ಹೆಸರಿನಲ್ಲಿ 21 ಎಕರೆ ಜಮೀನಿದೆ. ಆದ್ರೆ, ಇದು ಸ್ಮಶಾನ ಮತ್ತು ಕೆರೆ ಭೂಮಿಯಾಗಿದ್ದು, ನಕಲಿ ದಾಖಲೆಗಳನ್ನ ಸೃಷ್ಟಿಸಿ ಸಚಿವರು ಅದನ್ನ ಕಬಳಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಇನ್ನು ಇದಕ್ಕೆ ಕೃಷ್ಣಭೈರೇಗೌಡ ಪ್ರತಿಕ್ರಿಯಿಸಿ, ತನಿಖೆ ಎದುರಿಸಲು ಸಿದ್ಧ ಎಂದು ಖಡಕ್ ಆಗಿ ಹೇಳಿದ್ದಾರೆ.ಆದ್ರೆ, ಭೂಕಬಳಿಕೆ ಆರೋಪವನ್ನೇ ಅಸ್ತ್ರವಾಗಿಸಿಕೊಂಡು ಬಿಜೆಪಿ ಕೃಷ್ಣಭೈರೇಗೌಡರ ವಿರುದ್ಧ ಮುಗಿಬಿದ್ದಿದೆ. ಇಂದು (ಡಿಸೆಂಬರ್ 18) ಉಭಯ ಸದನದಲ್ಲೂ ಈ ವಿಚಾರವೇ ಪ್ರತಿಧ್ವನಿಸಿದೆ. ಬಿಜೆಪಿ ಆರೋಪಕ್ಕೆ ಸಚಿವರು ಕೂಡ ತಿರುಗೇಟು ಕೊಟ್ಟಿದ್ದಾರೆ. ಇನ್ನು ಬಿಜೆಪಿ ಆರೋಪ ಮಾಡಿರುವ ಆ ಭೂಮಿ ಹೇಗಿದೆ? ಎಲ್ಲಿದೆ? ಎನ್ನುವುದನ್ನು ನಮ್ಮ ಕೋಲಾರ ಪ್ರತಿನಿಧಿ ಸ್ಥಳದಿಂದ ಮಾಹಿತಿ ನೀಡಿದ್ದಾರೆ ನೋಡಿ.

